ರಾತ್ರೋರಾತ್ರಿ ದೆಹಲಿಗೆ ತೆರಳಿದ ಜಗದೀಶ್ ಶೆಟ್ಟರ್: ಹೆಚ್ಚಿದ ಕುತೂಹಲ

ಹುಬ್ಬಳ್ಳಿ:

 ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಿ ರಾಜ್ಯಕ್ಕೆ ವಾಪಸ್ಸಾದ ಬೆನ್ನಲ್ಲೇ ಇದೀಗ ಬಿಜೆಪಿ ಹೈ ಕಮಾಂಡ್ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಬುಲಾವ್ ನೀಡಿದೆ.

ವರಿಷ್ಠರ ನಿರ್ದೇಶನದಂತೆ ನಿನ್ನೆ ರಾತ್ರಿ ಜಗದೀಶ್ ಶೆಟ್ಟರ್ ಅವರು ದೆಹಲಿಗೆ ಭೇಟಿ ನೀಡಿದ್ದು, ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಕುತೂಹಲವನ್ನು ಕೆರಳಿಸಿದೆ.

 ಸಚಿವ ಸಂಪುಟ ಪುನರ್‌ರಚನೆ ಮಾಡಿ ಶೆಟ್ಟರ್​​ಗೆ​​ ಅವಕಾಶ ನೀಡಿದರೆ ಅದನ್ನು ಅವರು ಒಪ್ಪಿಕೊಳ್ಳುತ್ತಾರೋ ಇಲ್ಲವೋ ಎಂಬುವುದನ್ನು ಅರಿಯಲು ಹಾಗೂ ಯಾರಿಗೆ ಸಚಿವ ಸ್ಥಾನ ಕೊಡಬೇಕು, ಯಾರನ್ನು ಕೈ ಬಿಡಬೇಕು ಎಂಬುದರ ಬಗ್ಗೆ ಸಲಹೆ ಕೇಳಲು ಅವರನ್ನು ಕರೆದಿರಬಹುದು ಎಂದು ಹೇಳಲಾಗುತ್ತಿದೆ.

ಈ ಹಿಂದೆ ಜಗದೀಶ್ ಶೆಟ್ಟರ್ ಅವರು ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ಬೇಡ ಎಂದು ಹೇಳಿದ್ದರು. ಶೆಟ್ಟರ್ ಅವರ ಈ ನಿರ್ಧಾರ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

     ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link