ನವದೆಹಲಿ:
ಕಾಂಗ್ರೆಸ್ ಪ್ರಣಾಳಿಕೆ ‘ನ್ಯಾಯ ಪತ್ರ’ದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಲು ನಾಜಿ ಪ್ರಚಾರಕ ಜೋಸೆಫ್ ಗೋಬೆಲ್ಸ್ ಅವರಿಂದ ಸ್ಫೂರ್ತಿ ಪಡೆದಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಲೇವಡಿ ಮಾಡಿದ್ದಾರೆ.
ಎನ್ಟಾಯರ್ ಪೊಲಿಟಿಕಲ್ ಸೈನ್ಸ್ನಲ್ಲಿ ಎಂಎ ಮಾಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗೋಬೆಲ್ಸ್ ಅವರ ಬಗ್ಗೆ ಓದಿ ಸ್ಪೂರ್ತಿ ಪಡೆದುಕೊಂಡಿರಬೇಕು ಎಂದು ವ್ಯಂಗ್ಯವಾಡಿದ್ದಾರೆ. ದೊಡ್ಡ ಸುಳ್ಳೊಂದು ಹೇಳಿ ಅದೇ ಸುಳ್ಳನ್ನು ಮತ್ತೆ ಮತ್ತೆ ಹೇಳಿದರೆ ಜನ ಅದನ್ನು ನಂಬುತ್ತಾರೆ ಎಂಬ ಗೋಬೆಲ್ಸ್ನ ಮಾತನ್ನು ಇಲ್ಲಿ ಉಲ್ಲೇಖಸಿದ್ದಾರೆ.