ಭಾರತ್ ಜೋಡೋ ನ್ಯಾಯ್ ಯಾತ್ರಾ ಸೈದ್ಧಾಂತಿಕ ಪಯಣ : ಜೈರಾಮ್‌ ರಮೇಶ್‌

ನವದೆಹಲಿ:

    ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರಾ ಸೈದ್ಧಾಂತಿಕ ಪಯಣ ಎಂದು ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್ ಬಣ್ಣಿಸಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್‌ ಭಾರತ್ ಜೋಡೋ ನ್ಯಾಯ್ ಯಾತ್ರೆ ಕುರಿತು ಮಾತನಾಡಿದ್ದು, ‘ಈ ಯಾತ್ರೆಯು ಧ್ರುವೀಕರಣ ರಾಜಕಾರಣ ಮತ್ತು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅನ್ಯಾಯದ ವಿರುದ್ಧ ಕಾಂಗ್ರೆಸ್‌ ಆರಂಭಿಸಿರುವ ಸೈದ್ಧಾಂತಿಕ ಹೋರಾಟವಾಗಿದೆ. ಇದು ಚುನಾವಣಾ ಯಾತ್ರೆಯಲ್ಲ, ರಾಜಕೀಯ ಪಕ್ಷದ ಸೈದ್ಧಾಂತಿಕ ಯಾತ್ರೆ’ ಎಂದು ಹೇಳಿದ್ದರು.

    ಇನ್ನು ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಒಕ್ಕೂಟದ ಇತರ ಪಕ್ಷಗಳ ನಾಯಕರು ಕೂಡ ಈ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗವಹಿಸಬಹುದು ಎಂದು ನಿರೀಕ್ಷಿಸಲಾಗಿದೆ. ಈಗಾಗಲೇ ಮೈತ್ರಿಕೂಟದ ಎಲ್ಲ ಮುಖಂಡರಿಗೆ ಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಹ್ವಾನ ನೀಡಿದ್ದಾರೆ.

    ಕಾಂಗ್ರೆಸ್ ನೇತೃತ್ವದಲ್ಲಿ ಒಟ್ಟು 6713 ಕಿಲೋಮೀಟರ್ ನಡೆಯಲಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆ ದೇಶದ ಒಟ್ಟು 15 ರಾಜ್ಯಗಳಲ್ಲಿ ಹಾದುಹೋಗಲಿದೆ. ಈ ಅವಧಿಯಲ್ಲಿ 110 ಜಿಲ್ಲೆಗಳು, 100 ಲೋಕಸಭಾ ಕ್ಷೇತ್ರಗಳು ಮತ್ತು 337 ವಿಧಾನಸಭಾ ಸ್ಥಾನಗಳು ಭಾರತ್ ಜೋಡೋ ನ್ಯಾಯ್ ಯಾತ್ರೆಯ ವ್ಯಾಪ್ತಿಗೆ ಬರಲಿವೆ.

    ಮಣಿಪುರ, ನಾಗಾಲ್ಯಾಂಡ್, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್, ಒಡಿಶಾ, ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್ ಮತ್ತು ಮಹಾರಾಷ್ಟ್ರ ಸೇರಿದಂತೆ 15 ರಾಜ್ಯಗಳಲ್ಲಿ ಈ ಯಾತ್ರೆ ಸಾಗಲಿದೆ. ಜೊತೆಗೆ ಭಾರತ್ ಜೋಡೋ ನ್ಯಾಯ್ ಯಾತ್ರೆಯು ಮಹಾರಾಷ್ಟ್ರದ ಮುಂಬೈನಲ್ಲಿ ಮುಕ್ತಾಯಗೊಳ್ಳಲಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap