ಓಕಳೀಪುರ ರೈಲ್ವೆ ಅಂಡರ್​ಪಾಸ್​ ನಲ್ಲಿ ನಿಂತ ನೀರು : ಜನರ ಪರದಾಟ

ಬೆಂಗಳೂರು

   ಬೆಂಗಳೂರಿನಲ್ಲಿ ಮಂಗಳವಾರ ಬೆಳಗ್ಗೆ ಭಾರಿ ಮಳೆ ಸುರಿದಿದೆ. ನಂತರ ಜಿಟಿಜಿಟಿ ಸುರಿಯುತ್ತಿರುವ ಮಳೆಯಿಂದಾಗಿ ಕೆಆರ್​ ಮಾರುಕಟ್ಟೆ ಸೇರಿದಂತೆ ಅನೇಕ ಕಡೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ನಗರದ ಓಕಳೀಪುರ ಅಂಡರ್ ಪಾಸ್​​ನಲ್ಲಿ ನೀರು ತುಂಬಿದ್ದು, ಕೆರೆಯಂತಾಗಿದೆ. ಅಂಡರ್ ಪಾಸ್ ಪೂರ್ತಿ ಮಳೆ ನೀರು ತುಂಬಿದ್ದು, ವಾಹನ ಸವಾರರು ಚಾಲನೆಗೆ ಹರಸಾಹಸಪಡುವಂತಾಗಿದೆ.

  ಅಂಡರ್ ಪಾಸ್​​​ನಲ್ಲಿ ನೀರು ನಿಂತಿರುವ ಕಾರಣ ವಾಹನಗಳು ಟ್ರಾಫಿಕ್ ಜಾಮ್​ನಲ್ಲಿ ಸಿಲುಕಿ ಪರದಾಟಪಡುವಂತಾಯಿತು. ಕಿಲೋಮೀಟರ್​​ಗಟ್ಟಲೇ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ.

Recent Articles

spot_img

Related Stories

Share via
Copy link