ಹೈದರಾಬಾದ್:
ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ 7 ವರ್ಷಗಳ ಶಿಕ್ಷೆಗೆ ಒಳಗಾಗಿದ್ದ ಜನಾರ್ದನ ರೆಡ್ಡಿ ತೆಲಂಗಾಣ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಸಿಬಿಐ ಕೋರ್ಟ್ ವಿಧಿಸಿದ್ದ ಶಿಕ್ಷೆಯನ್ನು ಹೈ ಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಹಲವು ಷರತ್ತು ವಿಧಿಸಿ ಜನಾರ್ದನ ರೆಡ್ಡಿಗೆ ಜಾಮೀನು ಮಂಜೂರು ಮಾಡಿದೆ. ತಲಾ 10 ಲಕ್ಷ ಮೌಲ್ಯದ ಇಬ್ಬರು ಶ್ಯೂರಿಟಿಗಳನ್ನ ಸಲ್ಲಿಸುವಂತೆ ಹೈ ಕೋರ್ಟ್ ಸೂಚನೆ ನೀಡಿದೆ.
ಓಬಳಾಪುರಂ ಮೈನಿಂಗ್ ಕಂಪನಿ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ಇತರರು ಸಲ್ಲಿಸಿರುವ ಅರ್ಜಿಗಳ ಕುರಿತು ತೆಲಂಗಾಣ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸಿದ್ದು, ಆರೋಪಿಗಳಾದ ಗಾಲಿ ಜನಾರ್ದನ ರೆಡ್ಡಿ, ಬಿ.ವಿ. ಶ್ರೀನಿವಾಸ ರೆಡ್ಡಿ, ವಿ.ಡಿ. ರಾಜಗೋಪಾಲ್ ಮತ್ತು ಅಲಿ ಖಾನ್ ಸಲ್ಲಿಸಿರುವ ಜಾಮೀನು ಅರ್ಜಿಗಳ ಜೊತೆಗೆ ಗಾಲಿ ಜನಾರ್ದನ ರೆಡ್ಡಿ ಪ್ರತ್ಯೇಕವಾಗಿ ಸಲ್ಲಿಸಿರುವ ಜೈಲು ಶಿಕ್ಷೆಯ ಅರ್ಜಿಗಳ ಮೇಲಿನ ಶಿಕ್ಷೆಯನ್ನು ರದ್ದುಗೊಳಿಸಿ ಹೈಕೋರ್ಟ್ ತೀರ್ಪು ನೀಡಿದೆ.
ಮಂಗಳವಾರ ರೆಡ್ಡಿ ಪರ ವಕೀಲರು ಕೋರ್ಟ್‌ನಲ್ಲಿ ವಾದ ಮಂಡಿಸಿದ್ದು. ಅರ್ಜಿದಾರರು ಈಗಾಗಲೇ ತಮ್ಮ ಜೈಲು ಶಿಕ್ಷೆಯ ಶೇಕಡಾ 50 ಕ್ಕಿಂತ ಹೆಚ್ಚು ಅಂದರೆ ಮೂರುವರೆ ವರ್ಷಗಳನ್ನು ಅನುಭವಿಸಿದ್ದಾರೆ ಎಂದು ಅವರು ಹೇಳಿದ್ದರು.
ನ್ಯಾಯಮೂರ್ತಿ ಕೆ. ಲಕ್ಷ್ಮಣ್ ಅವರ ಪೀಠವು ಜನಾರ್ದನ ರೆಡ್ಡಿಗೆ ಹಲವು ಶರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದೆ 10 ಲಕ್ಷ ರೂಪಾಯಿ ಶೂರಿಟಿ ಹಾಗೂ ಪಾಸ್ಪೋರ್ಟ್ ವಶಕ್ಕೆ ನೀಡಲು ಸೂಚನೆ ನೀಡಿದೆ. ಅಲ್ಲದೆ ದೇಶ ಬಿಟ್ಟು ಹೋಗದಂತೆ ಜನಾರ್ಧನ ರೆಡ್ಡಿಗೆ ಹೈಕೋರ್ಟ್ ಸೂಚನೆ ನೀಡಿದೆ.
