ಬೆಂಗಳೂರು:
ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಅವರಿಗೆ ಕಾಂಗ್ರೆಸ್ ಸೇರುವಂತೆ ಪಕ್ಷದ ಸದಸ್ಯರು ಬಹಿರಂಗವಾಗಿ ಆಹ್ವಾನ ನೀಡಿದ್ದಾರೆ.
ಸದನದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಜೊತೆಗೆ ಮಾತನಾಡುವಾಗ ಸೋಮಶೇಖರ ರೆಡ್ಡಿ ಅವರಿಗೆ ಕಾಂಗ್ರೆಸ್ ಸೇರಲು ಆಹ್ವಾನ ನೀಡಲಾಗಿದೆ.
ಇದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಜನಾರ್ಧನರೆಡ್ಡಿ ಹೇಳಿದರೆ ನಾನು ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂದು ತಿಳಿಸಿದ್ದಾರೆ.
ಮಾಜಿ ಸಚಿವ ಜನಾರ್ಧನ ರೆಡ್ಡಿ ಹೇಳಿದರೆ ಸೋದರ ಸೋಮಶೇಖರ ರೆಡ್ಡಿ ಕಾಂಗ್ರೆಸ್ ಸೇರ್ತಾರಾ? ಇಲ್ಲವೇ ಕಾಂಗ್ರೆಸ್ ಸ್ನೇಹಿತರು ಪಕ್ಷ ಸೇರಲು ಆಹ್ವಾನಿಸಿದಾಗ ಸಂದರ್ಭಕ್ಕೆ ತಕ್ಕಂತೆ ತಮಾಷೆಯಾಗಿ ಪ್ರತಿಕ್ರಿಯೆ ನೀಡಿದ್ದಾರೆಯೇ ಎನ್ನುವುದು ಚರ್ಚೆಗೆ ಕಾರಣವಾಗಿದೆ ಎಂದು ಹೇಳಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ