ಜನಸೇವಾ ಟ್ರಸ್ಟ್‌ ಗೆ ಭೂಮಿ : ಆದೇಶ ತಡೆ ಹಿಡಿದ ಸರ್ಕಾರ

ಬೆಂಗಳೂರು: 

     ಆರೆಸ್ಸೆಸ್‌ಗೆ ಸೇರಿದ ಜನಸೇವಾ ಟ್ರಸ್ಟ್‌ಗೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕುರುಬರಹಳ್ಳಿ ಗ್ರಾಮದ ತಾವರೆಕೆರೆ ಹೋಬಳಿಯಲ್ಲಿ ಹಿಂದಿನ ಬಿಜೆಪಿ ಸರ್ಕಾರ 35 ಎಕರೆ 33 ಗುಂಟೆ ಗೋಮಾಳ ಜಮೀನು ನೀಡಿತ್ತು. ಕಳೆದ ಸೆಪ್ಟೆಂಬರ್‌ನಲ್ಲಿ ಗೋಮಾಳ ಭೂಮಿಯನ್ನು ಬಿಜೆಪಿ ಸರ್ಕಾರ ಜನಸೇವಾ ಟ್ರಸ್ಟ್‌ಗೆ ನೀಡಿತ್ತು. 2023ರ ಮೇ 22ರಂದು ಜಿಲ್ಲಾಧಿಕಾರಿ ಮಂಜೂರು ಆದೇಶ ಹೊರಡಿಸಿದ್ದರು. ಗೋಮಾಳವು ಜಾನುವಾರುಗಳ ಮೇವಿಗಾಗಿ ಮೀಸಲಿರಿಸಿದ ಸರ್ಕಾರಿ ಭೂಮಿಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

     ಕಳೆದ ಮೂರು ವರ್ಷಗಳಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕಿನಲ್ಲಿ ಎಷ್ಟು ಸರ್ಕಾರಿ ಜಮೀನನ್ನು ಸಂಘ ಸಂಸ್ಥೆಗಳಿಗೆ, ಇಲಾಖೆಗಳಿಗೆ ಮತ್ತು ವಿವಿಧ ಉದ್ದೇಶಗಳಿಗೆ ನೀಡಲಾಗಿದೆ ಎಂದು ಬಿಜೆಪಿ ಶಾಸಕ ಎಸ್‌.ಟಿ. ಸೋಮಶೇಖರ್‌ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಜನಸೇವಾ ಟ್ರಸ್ಟ್‌ಗೆ 35 ಎಕರೆ 33 ಗುಂಟೆ ಮಂಜೂರು ಮಾಡುವುದನ್ನು ತಡೆಹಿಡಿಯಲಾಗಿದೆ ಎಂಬ ಮುಖ್ಯಮಂತ್ರಿಯವರ ಸೂಚನೆಯನ್ನು ಉಲ್ಲೇಖಿಸಿದ್ದಾರೆ.

      ತರಾತುರಿಯಲ್ಲಿ ಜಮೀನು ಮಂಜೂರು ಮಾಡಿರುವ ಎಲ್ಲ ಪ್ರಕರಣಗಳನ್ನು ನಾವು ಪರಿಶೀಲಿಸುತ್ತಿದ್ದೇವೆ. ಗೋಶಾಲೆಯ ಉದ್ದೇಶಕ್ಕಾಗಿ ಒಂದು ಲಾಭರಹಿತ ಸಂಸ್ಥೆಗೆ 35 ಎಕರೆ ಜಮೀನು ನೀಡಲಾಗಿದೆ’ ಎಂದ ಸಚಿವರು, ‘ನಾವು ಅರ್ಹತೆ ಮತ್ತು ಉದ್ದೇಶದ ಆಧಾರದಲ್ಲಿ ಭೂಮಿ ಮಂಜೂರಾತಿಯನ್ನು ಪರಿಶೀಲಿಸುತ್ತೇವೆ. ಸಾರ್ವಜನಿಕ ಹಿತಾಸಕ್ತಿ ಇದೆಯೇ ಅಥವಾ ಇಲ್ಲವೇ ಎಂಬುದನ್ನೂ ನೋಡುತ್ತೇವೆ’  ಎಂದು ಹೇಳಿದ್ದಾರೆ.

      2019 ಮತ್ತು 2022ರ ನಡುವೆ ಬಿಜೆಪಿ ಅಧಿಕಾರದಲ್ಲಿದ್ದಾಗ ಆದಿಚುಂಚುನಗಿರಿ ಮಠ, ಸಿದ್ದಗಂಗಾ ಮಠ, ಇಸ್ಕಾನ್, ರಾಷ್ಟ್ರೋತ್ಥಾನ ಪರಿಷತ್, ಕರ್ನಾಟಕ ಲಾನ್ ಟೆನಿಸ್ ಸಂಘ, ಒಕ್ಕಲಿಗರ ಸಂಘ ಸೇರಿದಂತೆ ವಿವಿಧ ಸಂಸ್ಥೆಗಳಿಗೆ ಒಂಬತ್ತು ಜಿಲ್ಲೆಗಳಲ್ಲಿ 252.36 ಎಕರೆ ಗೋಮಾಳ ಭೂಮಿ ಮಂಜೂರಾಗಿದೆ.

      ನಾವು ಅವಸರದ ಹಂಚಿಕೆಗಳ ಪ್ರಕರಣಗಳನ್ನು ಪರಿಶೀಲಿಸುತ್ತಿದ್ದೇವೆ, ಇದರಲ್ಲಿ ಅರ್ಹವಲ್ಲದ ಅನುದಾನಗಳು ಸೇರಿವೆ” ಎಂದು ಕೃಷ್ಣ ಬೈರೇಗೌಡ ಹೇಳಿದರು. ಗೋಶಾಲೆಯ ಉದ್ದೇಶಕ್ಕಾಗಿ ಒಂದು ಲಾಭ ರಹಿತ ಸಂಸ್ಥೆಗೆ 35 ಎಕರೆ ಭೂಮಿಯನ್ನು ನೀಡಲಾಗಿದೆ ಎಂದು ಸಚಿವರು ಗಮನಸೆಳೆದರು. “ನಾವು ಅರ್ಹತೆ ಮತ್ತು ಉದ್ದೇಶದ ಆಧಾರದ ಮೇಲೆ ಅನುದಾನವನ್ನು ಪರಿಶೀಲಿಸುತ್ತೇವೆ. ಸಾರ್ವಜನಿಕ ಹಿತಾಸಕ್ತಿ ಇದೆಯೇ ಅಥವಾ ಇಲ್ಲವೇ ಎಂಬುದನ್ನು ನಾವು ನೋಡುತ್ತೇವೆ ಎಂದು ಅವರು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link