ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಗುರುವಾರ, ಫೆಬ್ರವರಿ 8 ರಂದು ರಾಜ್ಯ ಮಟ್ಟದ 2ನೇ ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಿದ್ದು, ಇದರ ಸದುಪಯೋಗಪಡಿಸಿಕೊಳ್ಳುವಂತೆ ಸೋಮವಾರ ಮನವಿ ಮಾಡಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಫೆಬ್ರವರಿ 8ರ ಗುರುವಾರದಂದು ವಿಧಾನಸೌಧ ಆವರಣದಲ್ಲಿ ನನ್ನ ನೇತೃತ್ವದಲ್ಲಿ ರಾಜ್ಯ ಮಟ್ಟದ 2ನೇ ಜನಸ್ಪಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ.
ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ನೇರವಾಗಿ ನನ್ನ ಬಳಿ ಸಲ್ಲಿಸಬಹುದಾಗಿದ್ದು, ಅವುಗಳಿಗೆ ಸ್ಥಳದಲ್ಲೇ ಅಥವಾ ಕಾಲಮಿತಿಯೊಳಗೆ ಪರಿಹಾರ ಗ್ಯಾರಂಟಿ. ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಇದರ ಸದುಪಯೋಗ ಪಡೆಯಬೇಕೆಂದು ಮನವಿ ಮಾಡುವುದಾಗಿ ಟ್ವೀಟ್ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ