ರಾಜ್ಯಮಟ್ಟದ ಜನಸ್ಪಂದನ : ಅರ್ಜಿ ಸ್ವೀಕಾರಕ್ಕಾಗಿ ಪ್ರತ್ಯೇಕ ಕೌಂಟರ್‌ ವ್ಯವಸ್ಥೆ

ಬೆಂಗಳೂರು

   ನಾಳೆ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ. ವೈದ್ಯಕೀಯ, ಕಂದಾಯ, ಪೊಲೀಸ್, ಪಹಣಿ, ಖಾತೆ, ಸರ್ವೆ, ಪೋಡಿ, ಅನ್ಯಾಯ ಹೀಗೆ ಯಾವುದೇ ವಿಚಾರಗಳಿರಲಿ, ತುರ್ತಾಗಿ ಸೂಕ್ತ ಪರಿಹಾರ ಸಿಗಲಿದೆ.

    ಈ ಸಂದರ್ಭದಲ್ಲಿ ಎಲ್ಲ ಇಲಾಖೆಗಳ ಮುಖ್ಯಸ್ಥರು ಮತ್ತು ಕಾರ್ಯದರ್ಶಿಗಳು ಕಡ್ಡಾಯವಾಗಿ ಹಾಜರಿರಲು ಸೂಚಿಸಲಾಗಿದೆ. ತಮ್ಮ ಅಹವಾಲುಗಳೊಂದಿಗೆ ಬರುವ ಜನರಿಗೆ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ. ಮೆಜೆಸ್ಟಿಕ್‌ ಬಸ್‌ ನಿಲ್ದಾಣ ಮತ್ತು ರೈಲು ನಿಲ್ದಾಣಕ್ಕೆ ಉಚಿತ ಬಸ್‌ ಪ್ರಯಾಣದ ಸೌಲಭ್ಯ ಇರಲಿದೆ. ಕುಡಿಯುವ ನೀರು ಪೂರೈಕೆ, ಲಘು ಉಪಾಹಾರ ಮತ್ತು ಊಟದ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

    ವಿವಿಧ ಇಲಾಖೆಗಳ ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರ್‌ಗಳನ್ನು ಮಾಡಲಾಗಿದೆ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಜನಪರ ಸರ್ಕಾರ ಎಲ್ಲಾ ರೀತಿಯಲ್ಲೂ ಸಿದ್ಧವಾಗಿದೆ.

ಜನಸ್ಪಂದನ ನಡೆಯುವ ದಿನಾಂಕ :

    ಫೆ.8 2024 ಕುಂದುಕೊರತೆ ಸಣ್ಣದು, ದೊಡ್ಡದೆಂಬ ಚಿಂತೆ ಬಿಡಿ, ಶೀಘ್ರ ಪರಿಹಾರಕ್ಕೆ ಅಹವಾಲುಗಳೊಂದಿಗೆ ಬನ್ನಿ ಎಂದು ಸಿಎಂ ಸಿದ್ದರಾಮಯ್ಯ ಸೋಶಿಯಲ್ ಮೀಡಿಯಾದಲ್ಲಿ ಪ್ರಕಟಣೆ ಹೊರಡಿಸಿದ್ದಾರೆ.

ಈ ರೀತಿ ನೋಂದಣಿ ಮಾಡಿಕೊಳ್ಳಿ : 

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಅಹವಾಲು ಸಲ್ಲಿಕೆಗೆ ಆನ್‌ಲೈನ್‌ ಮೂಲಕ ನೋಂದಾಯಿಸಲು 1902 ಡಯಲ್‌ ಮಾಡಿ. ವಿಧಾನಸೌಧ ಮುಂಭಾಗ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ನಡೆಯಲಿರುವ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸದುಪಯೋಗ ಪಡಿಸಿಕೊಳ್ಳಿ.

ಈ ದಾಖಲೆಗಳು ಕಡ್ಡಾಯ :

    ಜನಸ್ಪಂದನದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿನ ಪತ್ರಗಳಾದ ಆಧಾರ್‌ ಕಾರ್ಡ್‌ ಅಥವಾ ಪಡಿತರ ಚೀಟಿ ತರಬೇಕು ಎಂದು ಸೂಚನೆ ನೀಡಲಾಗಿದೆ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap