ನವದೆಹಲಿ:
ಭಾರತದ ಮಿತ್ರ ರಾಷ್ಟ್ರ ಎಂದೇ ವಿಶ್ವ ವೇದಿಕೆಯಲ್ಲಿ ಪ್ರಸಿದ್ಧವಾಗಿರುವ ಜಪಾನ್ ದೇಶದ ಪ್ರಧಾನಿ ಫುಮಿಯೊ ಕಿಶಿದಾ ಅವರು ಎರಡು ದಿನಗಳ ದ್ವೈಪಕ್ಷೀಯ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ಕಿಶಿದಾ ಅವರನ್ನು ದೆಹಲಿಯ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಬರಮಾಡಿಕೊಂಡರು.
ನರೇಂದ್ರ ಮೋದಿ ಅವರನ್ನು ಫ್ರೆಮಿಯಾ ಕಿಶಿದಾ ಭೇಟಿ ಮಾಡಲಿದ್ದು, ಜಪಾನ್- ಇಂಡಿಯಾ ಫೆಸಿಪಿಕ್ ಕಾರ್ಯತಂತ್ರ ಮತ್ತು ಅದರ ಹೊಸ ರಕ್ಷಣಾ ನಿಲುವು ಕುರಿತು ಮಾತನಾಡಲಿದ್ದಾರೆ. 15 ವರ್ಷಗಳ ಹಿಂದೆ ದೆಹಲಿಗೆ ಭೇಟಿ ನೀಡಿದ್ದ ಜಪಾನ್ ಪ್ರಧಾನಿ ಶಿಂಜೋ ಅಬೆ ಆದ ಮೇಲೆ ಇದೇ ಮೊದಲ ಬಾರಿಗೆ ಇಂಡೋ-ಫೆಸಿಪಿಕ್ ಸಹಕಾರ ಕುರಿತಂತೆ ಮಾತನಾಡಿದ್ದರು.
