ಜಾತಿ ನಿಂದನೆ ಕೇಸ್‌ಗೆ ಹೆದರಿ ಮಗ ಆತ್ಮಹತ್ಯೆ, ತಂದೆ ಹೃದಯಾಘಾತದಿಂದ ಸಾವು

ಯಾದಗಿರಿ:

   ತನ್ನ ವಿರುದ್ಧ ಜಾತಿ ನಿಂದನೆ ಕೇಸ್​ ದಾಖಲಾಗುವುದೆಂದು ಹೆದರಿ ಮಗ ಆತ್ಮಹತ್ಯೆ  ಮಾಡಿಕೊಂಡರೆ, ಮಗನ ಸಾವಿನ ಸುದ್ದಿ ತಿಳಿದು ತಂದೆ ಹೃದಯಾಘಾತದಿಂದ ಸಾವನ್ನಪ್ಪಿರುವ  ಘಟನೆ ಯಾದಗಿರಿ  ಜಿಲ್ಲೆಯ ವಡಗೇರ ಪಟ್ಟಣದಲ್ಲಿ ನಡೆದಿದೆ. ಮರಕ್ಕೆ ನೇಣು ಬಿಗಿದುಕೊಂಡು ಮಗ ಮೆಹಬೂಬ್ (22) ಆತ್ಮಹತ್ಯೆಗೆ ಶರಣಾಗಿದ್ದು, ಹೃದಯಾಘಾತದಿಂದ ತಂದೆ ಸೈಯದ್ ಅಲಿ (50) ಸಾವನ್ನಪ್ಪಿದ್ದಾರೆ. ವಡಗೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

   ಬೇರೆಯವರ ಜಮೀನಿನ ಮೂಲಕ ತನ್ನ ಜಮೀನಿಗೆ ನಡೆದುಕೊಂಡು ಹೋಗುವ ವಿಚಾರವಾಗಿ ಕಳೆದ ಒಂದು ವಾರದ ಹಿಂದೆ ವಡಗೇರ ಪಟ್ಟಣದ ದಲಿತ ಕುಟುಂಬದ ಜೊತೆ ಜಗಳ ಉಂಟಾಗಿತ್ತು. ಜಗಳದ ಬಳಿಕ ಹಿರಿಯರು ಕುಳಿತು ನ್ಯಾಯ ಪಂಚಾಯತಿ ಮಾಡಿ‌ ಬಗೆ ಹರಿಸಿದ್ದರು. ಆದರೆ ಬೇರೆ ಊರಿಂದ‌ ಬಂದ ದಲಿತ ಮುಖಂಡನೊಬ್ಬ, ಜಾತಿ‌ ನಿಂದನೆ ಕೇಸ್ ದಾಖಲು ಮಾಡಿ ನಿಮ್ಮನ್ನು ಜೈಲಿಗೆ ಕಳುಹಿಸುತ್ತೇನೆ ಎಂದು ಮೆಹಬೂಬ್​ಗೆ ಬೆದರಿಕೆ ಹಾಕಿದ್ದರು.

   ಕೇಸ್ ದಾಖಲಾದರೆ ಮರ್ಯಾದೆ ಹೋಗುತ್ತದೆ, ಜೈಲಿಗೆ ಹೋಗಬೇಕಾಗುತ್ತದೆ ಎಂದು ಮೆಹಬೂಬ್​ ಅಂಜಿದ್ದಾನೆ. ಇದೇ ಕಾರಣಕ್ಕೆ ಬುಧವಾರ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇತ್ತ ಮಗನ ಆತ್ಮಹತ್ಯೆ ಸುದ್ದಿ ತಿಳಿದು ಶಾಕ್​ಗೆ ಒಳಗಾದ ತಂದೆಗೆ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಕಲಬುರಗಿಯ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಂದೆ ಸೈಯದ್ ಸಲಿ ಕೂಡ ಕೊನೆಯುಸಿರೆಳೆದಿದ್ದಾರೆ.

Recent Articles

spot_img

Related Stories

Share via
Copy link