ಹೊಸ ಬಾಂಬ್‌ ಸಿಡಿಸಿದ ಜಯಾ ಬಚ್ಚನ್….!

ನವದೆಹಲಿ:

   ಮಹಾ ಕುಂಭಮೇಳದಲ್ಲಿ ಕಾಲ್ತುಳಿತದ ನಂತರ ಶವಗಳನ್ನು ನದಿಗೆ ಎಸೆಯಲಾಗಿದೆ ಎಂದು ಸಮಾಜವಾದಿ ಪಕ್ಷದ ರಾಜ್ಯಸಭಾ ಸಂಸದೆ ಜಯಾ ಬಚ್ಚನ್ ಅವರು ಸಂಚಲನಾತ್ಮಕ ಹೇಳಿಕೆ ನೀಡಿದ್ದಾರೆ. ಈ ಘಟನೆಯ ನಂತರ ಮಹಾ ಕುಂಭಮೇಳದಲ್ಲಿ ಜಲ ಮಾಲಿನ್ಯದ ಗಂಭೀರ ಬೆದರಿಕೆ ಉದ್ಭವಿಸಿದೆ. ಆದರೆ ಸರ್ಕಾರ ಈ ಬಗ್ಗೆ ಯಾವುದೇ ನಿರ್ದಿಷ್ಟ ಉತ್ತರವನ್ನು ನೀಡುತ್ತಿಲ್ಲ ಎಂದು ಜಯ ಆರೋಪಿಸಿದ್ದಾರೆ.

   ಕಾಲ್ತುಳಿತದಲ್ಲಿ ಮೃತಪಟ್ಟವರ ಶವಗಳನ್ನು ನೀರಿಗೆ ಎಸೆಯಲಾಗಿದ್ದು, ಇದರಿಂದ ನೀರು ಕಲುಷಿತಗೊಂಡಿದೆ ಎಂದು ಜಯಾ ಬಚ್ಚನ್ ಆರೋಪಿಸಿದ್ದು ಈ ವಿಷಯದ ಬಗ್ಗೆ ಸರ್ಕಾರ ಮೌನ ವಹಿಸಿದೆ ಎಂದರು.

   ಮಹಾ ಕುಂಭ ಮೇಳದ ಬಗ್ಗೆ ಸರ್ಕಾರ ಸುಳ್ಳು ಹೇಳಿಕೆಗಳನ್ನು ನೀಡುತ್ತಿದೆ ಎಂದು ಸಂಸದೆ ಜಯಾ ಬಚ್ಚನ್ ಹೇಳಿದ್ದಾರೆ. ವಿಐಪಿ ವ್ಯವಸ್ಥೆಗಳ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದು, ವಿಐಪಿ ಭಕ್ತರಿಗೆ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ. ಆದರೆ ಸಾಮಾನ್ಯ ಜನರಿಗೆ ಯಾವುದೇ ಸೌಲಭ್ಯಗಳಿಲ್ಲ ಎಂದು ಹೇಳಿದರು. “ದುರ್ಬಲ ವರ್ಗದ ಜನರಿಗೆ ಯಾವುದೇ ವ್ಯವಸ್ಥೆ ಇರಲಿಲ್ಲ, ಆದರೆ ವಿಐಪಿ ಜನರು ಕುಂಭಕ್ಕೆ ಹೋಗುತ್ತಾರೆ, ಸ್ನಾನ ಮಾಡುತ್ತಾರೆ ಮತ್ತು ಅವರಿಗೆ ವಿಶೇಷ ಸೌಲಭ್ಯಗಳನ್ನು ಒದಗಿಸಲಾಗಿದೆ” ಎಂದು ಅವರು ಹೇಳಿದರು. 

   ಜನವರಿ 29ರಂದು ಮಹಾಕುಂಭದಲ್ಲಿ ಮೌನಿ ಅಮವಾಸ್ಯೆಯ ಸ್ನಾನದ ಸಮಯದಲ್ಲಿ, ಪ್ರಯಾಗ್‌ರಾಜ್‌ನ ಸಂಗಮ್ ಪ್ರದೇಶದಲ್ಲಿ ಕಾಲ್ತುಳಿತ ಸಂಭವಿಸಿತ್ತು. ಇದರಲ್ಲಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು 60 ಕ್ಕೂ ಹೆಚ್ಚು ಭಕ್ತರು ಗಾಯಗೊಂಡರು. ಈ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆ ಆರಂಭವಾಗಿದೆ ಎಂದು ಸರ್ಕಾರ ಹೇಳುತ್ತಿರುವಾಗ, ಪ್ರತಿಪಕ್ಷಗಳು ಈ ವಿಷಯದ ಬಗ್ಗೆ ಸರ್ಕಾರದ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿವೆ.

 

Recent Articles

spot_img

Related Stories

Share via
Copy link