ಬೆಂಗಳೂರು:
ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ಅವರು ಸೋಮವಾರ ಬೆಳಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಒಟ್ಟು ಆರು ಭಾಷೆಗಳಲ್ಲಿ 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ವರನಟ ಡಾ. ರಾಜ್ ಕುಮಾರ್ ಜೊತೆಗೆ ಸುಮಾರು 45 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು.
ನಟಿ ಜಯಂತಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರಸ್ವಾಮಿ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಅನೇಕ ಗಣ್ಯರು ಮತ್ತು ಕಲಾವಿದರು ಸಂತಾಪ ಸೂಚಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ