ಗೋಕಾಕ ಸಾಹುಕಾರ್‌ ಸೋಲಿಸಲು ಒಂದಾದ “ಕೈ-ದಳ”….!

ಬೆಳಗಾವಿ
 
    ಜಿಲ್ಲೆಯ ಗೋಕಾಕ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಚಂದನ್ ಗಿಡ್ಡನವರ್ ಪಕ್ಷಕ್ಕೆ ತಿಳಿಯದಂತೆ ನಾಮಪತ್ರ ಹಿಂಪಡೆದಿದ್ದಾರೆ. ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ವಿರುದ್ಧ ಚಂದನ್ ಅವರು ಕಾಂಗ್ರೆಸ್ ಜೊತೆ ಕೈಜೋಡಿಸಿದ್ದಾರೆ. 
     ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ವಿರುದ್ಧ ಚಂದನ್ ಅವರು ಕಾಂಗ್ರೆಸ್ ಜೊತೆ ಕೈಜೋಡಿಸಿದ್ದಾರೆ. ಈ ಬೆಳವಣಿಗೆಯ ನಂತರ ಜೆಡಿಎಸ್ ಅಭ್ಯರ್ಥಿಯನ್ನು ಪಕ್ಷದಿಂದ ಉಚ್ಚಾಟಿಸಲು ನಿರ್ಧರಿಸಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಬದ್ಧ ವೈರಿಯಾದ ಜಾರಕಿಹೊಳಿ ಅವರಿಗೆ ಬಿಜೆಪಿ ಬೆಂಬಲ ನೀಡುತ್ತಿದೆ.

     ಜೆಡಿಎಸ್ ಅಭ್ಯರ್ಥಿಯು ಕಣದಿಂದ ಹಿಂದೆಸರಿದಿರುವುದರಿಂದ ಈಗ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಹಂಚಿಕೆಯಾಗುವ ನಿರೀಕ್ಷೆಯಿದ್ದ ಅಲ್ಪಸಂಖ್ಯಾತರ ಮತಗಳು ಈಗ ಮತ್ತೆ ಹಳೆಯ ಪಕ್ಷಕ್ಕೆ ಒಲಿದು ಬರಲಿವೆ. ಜಾರಕಿಹೊಳಿ ಈಗ ಹಿಂದೂ ಮತಗಳ ಧ್ರುವೀಕರಣಕ್ಕೆ ಶ್ರಮಿಸಬೇಕಾಗಿದೆ. ಮಹಾಂತೇಶ ಕಡಾಡಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap