ಇಂದಿನಿಂದ ಬೆಂಗಳೂರಿಂದ ಮೈಸೂರಿನವರೆಗೆ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ…..!

ಬೆಂಗಳೂರು: 

   ಮೈಸೂರು ಅಭಿವೃದ್ಧಿ ಪ್ರಾಧಿಕಾರ  ನೀವೇಶನ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿದೆ, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಇಷ್ಟು ದಿನ ಆಗ್ರಹಿಸುತ್ತಲೇ ಬಂದಿದ್ದು ವಿಪಕ್ಷಗಳು ತಮ್ಮ ಪ್ರತಿಭಟನೆ, ಹೋರಾಟವನ್ನು ಪಾದಯಾತ್ರೆ ಮೂಲಕ ಇಂದು ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ.

    ಮುಡಾ ಅಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಭಾಗಿಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಿನಾಮೆ ಆಗ್ರಹಿಸಿ ಇಂದು ಬಿಜೆಪಿ ಮತ್ತು ಜೆಡಿಎಸ್ ​ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡಲು ಸಿದ್ದವಾಗಿವೆ.

    ಇಂದು ಶನಿವಾರ ಆಗಸ್ಟ 3 ಬೆಳಗ್ಗೆ 8.30ಕ್ಕೆ ಬೆಂಗಳೂರಿನ ಕೆಂಗೇರಿಯ ಕೆಂಪಮ್ಮ ದೇವಸ್ಥಾನದ ಬಳಿ ಇರುವ ಜೆ.ಕೆ. ಗ್ರ್ಯಾಂಡ್ ಅರೆನಾ ಸೆಂಟರ್​ನಲ್ಲಿ ಪಾದಯಾತ್ರೆ ಉದ್ಘಾಟನೆ ನೆರವೇರಲಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಾಜ್ಯ ಉಸ್ತುವಾರಿ ಡಾ. ರಾಧಾ ಮೋಹನ್‌ದಾಸ್ ಅಗರ್‌ವಾಲ್, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮೊದಲಾದವರು ಭಾಗಿಯಾಗಲಿದ್ದಾರೆ.

    ಬಳಿಕ ಇಂದು 10 ಗಂಟೆ ಸುಮಾರಿಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಮೈಸೂರು ಚಲೋ ಪಾದಯಾತ್ರೆ ಆರಂಭಕ್ಕೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದರ್ಶನ ಮಾಡಿ ಪೂಜೆ ಸಲ್ಲಿಸಿ ಬಳಿಕ ಬೆಂಗಳೂರಿಗೆ ವಾಪಸ್​ ಆಗಲಿದ್ದಾರೆ.

Recent Articles

spot_img

Related Stories

Share via
Copy link
Powered by Social Snap