ಜೆಡಿಎಸ್ ತೆಕ್ಕೆಗೆ ಮಂಡ್ಯ ನಗರಸಭೆ!

ಮಂಡ್ಯ: 

    ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಕಾರಣವಾಗಿದ್ದ ಮಂಡ್ಯ ನಗರಸಭಾ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಆಗಸ್ಟ್ 28ರಂದು ನಡೆದ ಚುನಾವಣೆಯಲ್ಲಿ ಜೆಡಿಎಸ್ ವಿಜಯ ಪತಾಕೆ ಹಾರಿಸಿದೆ.

   ಉಭಯ ಪಕ್ಷಗಳ ನಾಯಕರಾದ ಕಾಂಗ್ರೆಸ್ಸಿನ ಚಲುವರಾಯ ಸ್ವಾಮಿ ಹಾಗೂ ಜೆಡಿಎಸ್ ನ ಎಚ್ ಡಿ ಕುಮಾರಸ್ವಾಮಿಯವರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಮಂಡ್ಯ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ನ ನಾಗೇಶ್ ಅವರು ಆಯ್ಕೆಯಾಗಿದ್ದಾರೆ. ಈ ಮೂಲಕ, ಚುನಾವಣೆಗೆ ಇನ್ನು ಕೆಲವು ದಿನ ಇರುವಾಗಲೇ ಆಪರೇಷನ್ ಹಸ್ತ ಮಾಡಿ ಜೆಡಿಎಸ್ ಎರಡು ಗಟ್ಟಿ ಕುಳಗಳನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡಿದ್ದ ಕಾಂಗ್ರೆಸ್ಸಿಗೆ ಸೆಡ್ಡು ಹೊಡೆದ ಕುಮಾರಸ್ವಾಮಿ, ರಿವರ್ಸ್ ಆಪರೇಷನ್ ಮಾಡಿ ಕಾಂಗ್ರೆಸ್ಸಿನ ಒಬ್ಬ ಪ್ರಭಾವಿ ನಾಯಕರನ್ನು ತಮ್ಮ ಹಿಡಿತಕ್ಕೆ ತೆಗೆದುಕೊಂಡು ಮಂಡ್ಯ ನಗರಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

Recent Articles

spot_img

Related Stories

Share via
Copy link