“ಕೈ” ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ “ದಳ”ಪತಿಗಳು….!

ಬೆಂಗಳೂರು

    ಕರ್ನಾಟಕದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಈಗಾಗಲೇ 14 ಲೋಕಸಭಾ ಕ್ಷೇತ್ರದಲ್ಲಿ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರವನ್ನ ನಡೆಸುತ್ತಿದ್ದು, ವಾಮಮರ್ಗದಲ್ಲಿ ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಅಕ್ರಮಗಳನ್ನು ಎಸಗುತ್ತಿದೆ ಎಂದು ಜೆಡಿಎಸ್ ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

   ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿಗಳನ್ನ ನೀಡುವ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಇದೀಗ, ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರು ಅವರು ಸಹಿ ಮಾಡಿರುವ ಗ್ಯಾರಂಟಿ ಕಾರ್ಡುಗಳನ್ನು ಮತದಾರರಿಗೆ ಹಂಚಲಾಗುತ್ತಿದೆ. ಈ ಮೂಲಕ ಮುಗ್ಧ ಮತದಾರರಿಗೆ ಆಮಿಷ ಒಡ್ಡಿ ಅವರನ್ನು ವಂಚಿಸಲಾಗುತ್ತಿದೆ ಎಂದು ಜೆಡಿಎಸ್ ಆರೋಪ ಮಾಡಿದೆ.

   ಮಾಜಿ ಸಚಿವ ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಹಿರಿಯ ಮುಖಂಡ ಆರ್.ಪ್ರಕಾಶ್ ಅವರಿದ್ದ ನಾಯಕರ ನಿಯೋಗ ಕೇಂದ್ರೀಯ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ವಿರುದ್ಧ ದೂರು ನೀಡಿದೆ.

   ಪಾರದರ್ಶಕವಾಗಿ, ನಿರ್ಭೀತಿ, ಭ್ರಷ್ಟಾಚಾರ ರಹಿತವಾಗಿ ನಡೆಯಬೇಕಿದ್ದ ಚುನಾವಣೆಯನ್ನು ಕಾಂಗ್ರೆಸ್ ಪಕ್ಷ ಗ್ಯಾರಂಟಿ ಕಾರ್ಡುಗಳನ್ನು ಹಂಚುವ ಮೂಲಕ ಕಲುಷಿತಗೊಳಿಸಿ ಅಕ್ರಮ ನಡೆಸುತ್ತಿದೆ. ನ್ಯಾಯ ಪತ್ರ ಹೆಸರಿನಲ್ಲಿ ಐದು ಗ್ಯಾರಂಟಿ ಕಾರ್ಡುಗಳ ಮೇಲೆ ಸಹಿ ಮಾಡಿ ಮತದಾರರಿಗೆ ಹಂಚಿಕೆ ಮಾಡುತ್ತಿರುವುದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಹಾಗೂ ಚುನಾವಣಾ ಅಕ್ರಮವೂ ಆಗಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಆ ಗ್ಯಾರಂಟಿ ಕಾರ್ಡುಗಳ ಹಂಚಿಯನ್ನು ತಡೆಯಬೇಕು ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಆಯೋಗವನ್ನು ಅಗ್ರಹಪಡಿಸಿದೆ.

    ಅಷ್ಟೇ ಅಲ್ಲದೆ, ಜನತಾ ಪ್ರತಿನಿಧಿ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯು ಇದಾಗಿದ್ದು, ಕಾಂಗ್ರೆಸ್ ಚುನಾವಣಾ ಆಶಯವನ್ನೇ ಬುಡಮೇಲು ಮಾಡುತ್ತಿದೆ ಎಂಬ ಅಂಶವನ್ನು ಪಕ್ಷ ಆಯೋಗದ ಗಮನಕ್ಕೆ ತಂದಿದೆ. ಅಲ್ಲದೆ, ಇಂತಹ ಭರವಸೆಗಳ ಮೂಲಕ ಕಾಂಗ್ರೆಸ್ ಕರ್ನಾಟಕ ಮತ್ತು ದೇಶದ ಆರ್ಥಿಕತೆ, ಬೊಕ್ಕಸಕ್ಕೆ ಹೊರಲಾರದ ಹೊರೆಯನ್ನು ಹೊರೆಸುತ್ತಿದೆ. ಆದ್ದರಿಂದ ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸುವುದಕ್ಕೆ ಆಯೋಗ ಅತ್ಯಂತ ಕಠಿಣ ಕ ಜರುಗಿಸಬೇಕು ಎಂದು ಜೆಡಿಎಸ್ ಒತ್ತಾಯ ಮಾಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap