ಬೆಂಗಳೂರು:
ತಮ್ಮ ಬಳಿ ಯಾವುದೇ ನಿವೇಶನ ಇಲ್ಲ. ನಿವೇಶನ ಬೇಕೆಂದು ಮನವಿ ಕೂಡ ಮಾಡಿಲ್ಲ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಜಾತ್ಯತೀಯ ಜನತಾ ದಳ ತಿರುಗೇಟು ನೀಡಿದೆ.
ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಜೆಡಿಎಸ್, ಗುಳಿಗೆ ಸಿದ್ದ ಒಳಗೆ ಮೇಯಿದ ಈ ಮಾತು ನಿಮ್ಮಂಥವರನ್ನು ನೋಡಿಯೇ ಹೇಳಿರಬೇಕು ಸಿದ್ದರಾಮಯ್ಯನವರೇ, ನನಗೆ ಒಂದು ನಿವೇಶನವೂ ಇಲ್ಲ. ಯಾವುದೇ ಲೆಟರ್ ಬರೆದಿಲ್ಲ” ಎಂದು ಸುಳ್ಳು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸಮಾಜವಾದಿ ಮುಖವಾಡ ತೊಟ್ಟು ನೀವು ಮಾಡಿರುವ ಅಕ್ರಮಗಳಿಗೆ ಈ ಲೆಟರ್ ಸಾಕ್ಷಿ ಎಂದು ಹರಿಹಾಯ್ದಿದೆ.