ಜೆಡಿಎಸ್ ಎರಡನೇ ಪಟ್ಟಿ ಬಹುತೇಕ ಸೋಮವಾರ ಬಿಡುಗಡೆ…!

ಬೆಂಗಳೂರು :

      ರಾಜ್ಯ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಹುತೇಕ ಸೋಮವಾರ ಬಿಡುಗಡೆಯಾಗುವ ನಿರೀಕ್ಷೆಯಿದೆ. ಹಾಸನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಯಾರು ಎನ್ನುವುದು ಕುತೂಹಲಕ್ಕೆ ಕಾರಣವಾಗಿದ್ದು, ಎರಡನೇ ಪಟ್ಟಿಯಲ್ಲಿ ಯಾರು ಸ್ಥಾನ ಪಡೆಯಲಿದ್ದಾರೆ ಎನ್ನುವ ಕಾತುರ ಹೆಚ್ಚಾಗಿದೆ.

     ಈಗಾಗಲೇ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಗೊಂದಲದಲ್ಲಿರುವ ಹಾಸನ ಕ್ಷೇತ್ರ ಸೇರಿ ಉಳಿದ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಮುಂದಿನ ಸೋಮವಾರ ಬೆಳಗ್ಗೆ ಬಿಡುಗಡೆ ಮಾಡುತ್ತೇವೆ. ಹಾಸನ ಕ್ಷೇತ್ರದ ಬಂಡಾಯಕ್ಕೆ  ಮಣೆ ಹಾಕುವ ಪ್ರಶ್ನೆಯೇ ಇಲ್ಲ, ನಮ್ಮ ಪಕ್ಷದಲ್ಲಿ ಕಾರ್ಯಕರ್ತರ ಭಾವನೆಗಳು ಮುಖ್ಯ, ಕಾರ್ಯಕರ್ತರಿಗೆ ಯಾವುದೇ ರೀತಿಯಲ್ಲಿ ನೋವುಂಟು ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಸ್ಪಷ್ಟಪಡಿಸಿದ್ದಾರೆ. 

    ಯಲಹಂಕ ವಿಧಾನಸಭಾ ಕ್ಷೇತ್ರದ ದಾಸನಪುರ ಹೋಬಳಿಯಲ್ಲಿ ಕಾಂಗ್ರೆಸ್ ಮುಖಂಡ ಟಿಸಿಐ ಚಂದ್ರಪ್ಪ ಹಾಗೂ ಅವರ ನೂರಾರು ಬೆಂಬಲಿಗರನ್ನು ಜೆಡಿಎಸ್ ಗೆ ಸೇರ್ಪಡೆ ಮಾಡಿಕೊಂಡು ಮಾತನಾಡಿ, ಕೆಲವು ಮಾಧ್ಯಮಗಳಲ್ಲಿ ಬರುತ್ತಿರುವ ಚುನಾವಣಾ ಪೂರ್ವ ಸಮೀಕ್ಷೆಗಳನ್ನು ಯಾರೂ ನಂಬಲು ಹೋಗಬೇಡಿ. ಇವುಗಳು ಕಾಂಗ್ರೆಸ್- ಬಿಜೆಪಿ ಹಣ ಕೊಟ್ಟು ಮಾಡಿಸುತ್ತಿರುವ ಸಮೀಕ್ಷೆಗಳು. ಈ ಬಾರಿ ಜೆಡಿಎಸ್ 120 ಸ್ಥಾನಗಳ ಗಡಿ ಮುಟ್ಟಲಿದೆ. ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಮತ್ತು ಬಿಜೆಪಿಗಿಂತ ಜೆಡಿಎಸ್ ಹೆಚ್ಚಿನ ಸ್ಥಾನಗಳನ್ನು ಗಳಿಸಿ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲಿದೆ. ರಾಜ್ಯದಲ್ಲಿ ಎರಡೂ ರಾಷ್ಟಿçÃಯ ಪಕ್ಷಗಳನ್ನು ದೂರವಿಡುವಂತಹ ಸಮಯ ಹತ್ತಿರವಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದರು.

ಯಲಹಂಕ ಕ್ಷೇತ್ರದಲ್ಲಿ ದೌರ್ಜನ್ಯ, ದಬ್ಬಾಳಿಕೆ ರಾಜಕಾರಣಕ್ಕೆ ಮುಕ್ತಿ ಸಿಗಲಿದೆ. ಕ್ಷೇತ್ರದ ಕಾರ್ಯಕರ್ತರು ಹೆದರಬೇಕಿಲ್ಲ. ನಿಮಗೆ ಸಣ್ಣ ಸಮಸ್ಯೆಯಾದರೂ ಒಂದು ಪೋನ್ ಮಾಡಿ ನಾನು ನಿಮ್ಮ ಜೊತೆಗೆ ಇರುತ್ತೇನೆ. ಯಾವ ಕೇಸು ಏನಕ್ಕೂ ಹೆದರಬೇಡಿ, ಅದನ್ನು ಪರಿಹರಿಸುತ್ತೇನೆ ಎಂದು ಅವರು ಕಾರ್ಯಕರ್ತರಲ್ಲಿ ವಿಶ್ವಾಸ ಮೂಡಿಸಿದರು. ಯಲಹಂಕ ಕ್ಷೇತ್ರದ ಹಾಲಿ ಶಾಸಕರ ಪಾಪದ ಕೊಡ ತುಂಬಿದೆ. ದುಡ್ಡು ಎರಚಿ ಓಟು ಹಾಕಿಸಿಕೊಳ್ಳುತ್ತೇನೆ ಎಂಬ ಅಹಂಕಾರದಲ್ಲಿದ್ದಾರೆ. ಅದಕ್ಕೆ ಕ್ಷೇತ್ರದ ಜನತೆ ತಕ್ಕ ಉತ್ತರ ನೀಡಬೇಕು ಎಂದು ಕರೆ ನೀಡಿದ ಕುಮಾರಸ್ವಾಮಿ, 2008, 2013 ಹಾಗೂ 2018 ಈ ಮೂರೂ ಸಲ ವಿಧಾನಸಭಾ ಚುನಾವಣೆಯಲ್ಲಿ ಯಲಹಂಕ ಕ್ಷೇತ್ರದಲ್ಲಿ ಜೆಡಿಎಸ್ ಕಡಿಮೆ ಅಂತರದಲ್ಲಿ ಸೋಲುವ ಮೂಲಕ ಎರಡನೇ ಸ್ಥಾನದಲ್ಲಿತ್ತು. ಈ ಬಾರಿ ಗೆಲುವು ನಿಶ್ಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಪೊಲೀಸ್ ಅಧಿಕಾರಿಗಳು, ಬಿಡಿಎ ಅಧಿಕಾರಿಗಳು ಸೇರಿದಂತೆ ಅಧಿಕಾರಿ ವರ್ಗದವರು ಆಡಳಿತದಲ್ಲಿರುವವರ ಮಾತು ಕೇಳಿಕೊಂಡು ನಮ್ಮ ಕಾರ್ಯಕರ್ತರಿಗೆ ತೊಂದರೆ ಕೊಡ್ತಿದ್ದೀರಿ. ಇನ್ನು ಮುಂದೆ ಹಾಗಾದರೆ ಕುಮಾರಸ್ವಾಮಿ ಏನು ಅಂತಾ ತೋರಿಸಬೇಕಾಗುತ್ತೆ, ಹಿಂದೆ ಎರಡು ಬಾರಿ ಮುಖ್ಯಮಂತ್ರಿ ಆಗಿದ್ದ ಕುಮಾರಸ್ವಾಮಿನೇ ಬೇರೆ, ಈಗಿನ ಕುಮಾರಸ್ವಾಮಿನೇ ಬೇರೆ. ಅಕ್ರಮಗಳಿಗೆ ಬೆಂಬಲ ನೀಡಿದರೆ ಏನು ಮಾಡಬೇಕು ಎಂಬುದು ಗೊತ್ತಿದೆ ಎಂದು ಗುಡುಗಿದರು. ಎದುರಾಳಿಗಳು ಕ್ಷೇತ್ರಕ್ಕೆ ಹೊರಗಿನಿಂದ ಗೂಂಡಾಗಳನ್ನು ಕರೆಸಿದರೆ ನನಗೆ ಮಾಹಿತಿ ನೀಡಿ ಎಂದು ಕಾರ್ಯಕರ್ತರಲ್ಲಿ ಧೈರ್ಯ ತುಂಬಿದ ಕುಮಾರಸ್ವಾಮಿ, ಬಿಜೆಪಿಯನ್ನು ಜನತೆ ರಾಜ್ಯದಿಂದ ದೂರ ಇಡುತ್ತಾರೆ, ಯಲಹಂಕದಲ್ಲೂ ದೌರ್ಜನ್ಯದಿಂದ ನಲುಗಿರುವ ಜನತೆ ಮುಕ್ತಿ ಬಯಸಿದ್ದಾರೆ ಎಂದು ಹೇಳಿದರು. ಯಲಹಂಕ ಜೆಡಿಎಸ್ ಅಭ್ಯರ್ಥಿ ಮುನೇಗೌಡ, ಟಿಸಿಐ ಚಂದ್ರಣ್ಣ, ವಿಧಾನ ಪರಿಷತ್ ಮಾಜಿ ಸದಸ್ಯ ಇ.ಕೃಷ್ಣಪ್ಪ, ಮುಖಂಡರಾದ ಎನ್. ಕೃಷ್ಣಪ್ಪ ಮೊದಲಾದವರು ಉಪಸ್ಥಿತರಿದ್ದರು.

ಇಂದಿನಿAದ ವಿವಿಧ ಜಿಲ್ಲೆಗಳಲ್ಲಿ ಪ್ರಚಾರ ಕಾರ್ಯ ನಡೆಸಲಾಗುವುದು. ಚಾಮರಾಜನಗರ, ಮೈಸೂರು, ಬಳ್ಳಾರಿ, ಹುಬ್ಬಳ್ಳಿ, ಧಾರವಾಡದಲ್ಲಿ ಏಪ್ರಿಲ್ 12 ರವರೆಗೆ ಪ್ರಚಾರ ನಡೆಸಲಾಗುವುದು. ಏಪ್ರಿಲ್ 13ರಿಂದ ಏಪ್ರಿಲ್ 20ರವರೆಗೆ ನಾಮಪತ್ರ ಸಲ್ಲಿಕೆಗೆ ಹಲವು ಕ್ಷೇತ್ರಗಳಿಗೆ ಭೇಟಿ ನೀಡಲಾಗುವುದು. ಏಪ್ರಿಲ್ 21ರಿಂದ ಏಪ್ರಿಲ್ 24ರವರೆಗೆ ರಾಮನಗರ, ಚನ್ನಪಟ್ಟಣ, ಕನಕಪುರದಲ್ಲಿ ಪ್ರಚಾರ ಮಾಡುತ್ತೇನೆ. ಎಲ್ಲಿಯೂ ಸಮಯ ವ್ಯರ್ಥ ಮಾಡುವುದಿಲ್ಲ. ಇನ್ನು, ಸಮೀಕ್ಷೆ ವರದಿಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ನಮ್ಮ ಗುರಿ ತಲುಪುವುದಕ್ಕೆ ಬೇಕಾದ ಕೆಲಸ ಮಾಡುತ್ತೇವೆ ಎಂದು ಹೇಳಿದರು.

Recent Articles

spot_img

Related Stories

Share via
Copy link
Powered by Social Snap