ಬೆಂಗಳೂರು
ಪ್ರಧಾನಿ ಮೋದಿಯವರು ಹಳೆ ಮೈಸೂರಿಗೆ ಕಾಲಿಡುವ ಮುನ್ನವೇ ಶಕ್ತಿ ಪ್ರದರ್ಶನ ನಡೆಸಲು ಜೆಡಿಎಸ್ ನಿರ್ಧರಿಸಿದ್ದು ಫೆಬ್ರವರಿ 27 ರಂದು ಚನ್ನಪಟ್ಟಣದಲ್ಲಿ ಬೃಹತ್ ಸಮಾವೇಶ ನಡೆಸಲಿದೆ. ಪ್ರಧಾನಿ ನರೇಂದ್ರಮೋದಿ ಮಾರ್ಚ್ ಎರಡನೇ ವಾರ ಮದ್ದೂರಿಗೆ ಆಗಮಿಸಲಿದ್ದು ಮೈಸೂರು-ಬೆಂಗಳೂರು ದಶಪಥ ರಸ್ತೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಈ ಕಾರ್ಯಕ್ರಮವನ್ನು ಹಳೆ ಮೈಸೂರು ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಬಳಸಿಕೊಳ್ಳಲು ಬಿಜೆಪಿ ನಿರ್ಧರಿಸಿದ್ದು,ಅದಕ್ಕೂ ಮುನ್ನ ಈ ಭಾಗದಲ್ಲಿ ತನ್ನ ಶಕ್ತಿ ಪ್ರದರ್ಶನ ನಡೆಸಲು ತೀರ್ಮಾನಿಸಿದೆ.
ಪಂಚರತ್ನ ಯಾತ್ರೆ ಈಗಾಗಲೇ ರಾಜ್ಯದ ಹಲವು ಭಾಗಗಳಲ್ಲಿ ಯಶಸ್ವಿಯಾಗಿ ನಡೆದಿದ್ದು,ಅದಕ್ಕೆ ಪೂರಕವಾಗಿ ಚನ್ನಪಟ್ಟಣದಲ್ಲಿ ಸಮಾವೇಶ ನಡೆಸಲು ಜೆಡಿಎಸ್ ನಿರ್ಧರಿಸಿದೆ. ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಬಲವನ್ನು ಹಣಿಯದಿದ್ದರೆ ಬಿಜೆಪಿಗೆ ಯಶಸ್ಸು ಸಿಗುವುದು ಕಷ್ಟ ಎಂಬುದು ಕಮಲ ಪಾಳೆಯಕ್ಕೆ ಅರಿವಾಗಿದೆ.
ಇದೇ ಕಾರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ಅವರು ಹಳೆ ಮೈಸೂರಿನ ಮೇಲೆ ಗಮನ ಕೇಂದ್ರೀಕರಿಸಿದ್ದು,ಇದಕ್ಕೆ ಟಕ್ಕರ್ ಕೊಡುವುದು ಜೆಡಿಎಸ್ ನಾಯಕರ ಲೆಕ್ಕಾಚಾರ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ