ಜೆಡಿಎಸ್ 123 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ : ಹೆಚ್‌ ಡಿ ಕೆ

ಚಿತ್ರದುರ್ಗ:

     ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ 123 ಕ್ಷೇತ್ರಗಳಲ್ಲಿ ಜಯಗಳಿಸಿ ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂದು ಜೆಡಿಎಸ್ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಬುಧವಾರ ವಿಶ್ವಾಸ ವ್ಯಕ್ತಪಡಿಸಿದರು.

     ಮೇ 13 ರಂದು ಫಲಿತಾಂಶಗಳು ಹೊರಬಿದ್ದ ನಂತರ ಎಲ್ಲಾ ಚುನಾವಣಾ ಪೂರ್ವ ಸಮೀಕ್ಷೆಗಳು ತಪ್ಪು ಎಂದು ಸಾಬೀತಾಗಲಿದೆ ಎಂದು ಹೇಳಿದರು.ಯಾವುದೇ ಪಕ್ಷಕ್ಕೂ ಬಹುಮತ ಸಿಗದೇ ಹೋದಲ್ಲಿ ಕಿಂಗ್ ಮೇಕರ್ ಆಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಕಿಂಗ್ ಮೇಕರ್ ಅಲ್ಲ, ಕಿಂಗ್ ಆಗುತ್ತೇನೆಂದು ತಿಳಿಸಿದರು.

    “ಕನ್ನಡಿಗರು ರಾಷ್ಟ್ರೀಯ ಪಕ್ಷಗಳಿಂದ ಹತಾಶರಾಗಿದ್ದು, ಇದೀಗ ಜೆಡಿಎಸ್’ನತ್ತ ನೋಡುತ್ತಿದ್ದಾರೆ, ರಾಜ್ಯದಲ್ಲಿ ಪ್ರಸ್ತುತ ರಾಜಕೀಯ ಸನ್ನಿವೇಶವು ನಮ್ಮ ಪಕ್ಷಕ್ಕೆ ಲಾಭವನ್ನು ತಂದುಕೊಡಲಿದೆ ಎಂದರು.ಬಳಿಕ ತಮ್ಮ ಪಕ್ಷವನ್ನು ರೈತ ಪರ ಪಕ್ಷವೆಂದು ಕರೆದ ಅವರು, ಈ ಹಿಂದೆ ನಮ್ಮ ಸರ್ಕಾರ ಜಾರಿಗೆ ತಂದಿದ್ದ ಯೋಜನೆಗಳು ಜೆಡಿಎಸ್‌ಗೆ ಬಹುಮತ ಪಡೆಯಲು ಸಹಾಯ ಮಾಡುತ್ತದೆ ಎಂದು ಹೇಳಿದರು.

     ಸದ್ಯದ ರಾಜಕೀಯ ಸನ್ನಿವೇಶದ ಬಗ್ಗೆ ಪ್ರತಿಕ್ರಿಯಿಸಿದ, ಇಷ್ಟೊಂದು ದೊಡ್ಡ ಮಟ್ಟದ ಪಕ್ಷಾಂತರಗಳು ನಡೆಯುತ್ತಿದೆ ಎಂದು ಊಹಿಸಿರಲಿಲ್ಲ ಎಂದರು.ಮಂಡ್ಯದಿಂದ ಕುಮಾರಸ್ವಾಮಿ ಕಣಕ್ಕಿಳಿಯುತ್ತಾರೆಂಬ ಊಹಾಪೋಹಗಳಿಗೆ ಉತ್ತರಿಸಿದ ಅವರು, ನಮ್ಮಲ್ಲಿ ಹಾಲಿ ಶಾಸಕರಿದ್ದು, ಮಂಡ್ಯದಲ್ಲಿ ಜೆಡಿಎಸ್ ಗೆಲ್ಲಲು 2-3 ಸಮರ್ಥ ಆಕಾಂಕ್ಷಿಗಳಿದ್ದಾರೆ. ನಾವು ಯಾರಿಗೂ ಸವಾಲು ಹಾಕಲು ಬಂದಿಲ್ಲ… ನಮ್ಮ ಕಾರ್ಯಕರ್ತರು ತಕ್ಕ ಉತ್ತರ ನೀಡುತ್ತಾರೆಂದು ಹೇಳಿದರು.

    ಹಾಸನ ಟಿಕೆಟ್‌ಗೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿದಿದ್ದು, ಪಕ್ಷದ ಅಭ್ಯರ್ಥಿ ಗೆಲುವಿಗೆ ಹೆಚ್‌ಡಿ ರೇವಣ್ಣ ಶ್ರಮಿಸಲಿದ್ದಾರೆ ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap