ಸಿಎಂ-ಡಿಸಿಎಂ ಜಂಟಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು?

ಬೆಂಗಳೂರು: 

     ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆ ನಡೆಯುತ್ತಿರುವ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌  ಅವರು ಭೇಟಿ ನೀಡಿದ್ದಾರೆ. ಡಿಕೆ.ಶಿವಕುಮಾರ್ ಅವರು ಕಾವೇರಿ ನಿವಾಸಕ್ಕೆ ಆಗಮಿಸುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಆತ್ಮೀಯವಾಗಿ ಸ್ವಾಗತಿಸಿದರು. ಶಿವಕುಮಾರ್ ಅವರು ಉಪಹಾರ ಸೇವಿಸಿದ್ದಾರೆ. ಇದೀಗ ಬ್ರೇಕ್ ಫಾಸ್ಟ್ ಮೀಟಿಂಗ್ ಅಂತ್ಯವಾಗಿದ್ದು, ಉಭಯ ನಾಯಕರು ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿದರು.

    ಸಿಎಂ ಸಿದ್ದರಾಮಯ್ಯ ಮಾತನಾಡಿ, ಹೈಕಮಾಂಡ್‌ ನಿರ್ಧಾರದ ಮೇಲೆ ನಾವಿಬ್ಬರೂ ಬ್ರೇಕ್‌ಫಸ್ಟ್‌ ಮೀಟಿಂಗ್‌ ಸೇರಿದ್ದೆವು. ಮೀಟಿಂಗ್‌ನಲ್ಲಿ 2028 ರ ಚುನಾವಣೆಯ ಕುರಿತು ಚರ್ಚೆ ನಡೆಸಿದ್ದೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಗೆಲುವಿನ ಕುರಿತು ಚರ್ಚೆ ನಡೆಸಲಾಯಿತು. ನಮ್ಮ ಮುಖ್ಯ ಉದ್ದೇಶ ಕಾಂಗ್ರೆಸ್‌ ಅನ್ನು ಮತ್ತೆ ಅಧಿಕಾರಕ್ಕೆ ತರುವುದು. ನನ್ನ ಹಾಗೂ ಶಿವಕುಮಾರ್‌ ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಅನಗತ್ಯ ಚರ್ಚೆಗಳಿಗೆ ಇಂದು ನಾವು ಬ್ರೇಕ್‌ ಹಾಕಿದ್ದೇವೆ ಎಂದು ಭಾವಿಸುತ್ತೇವೆ ಎಂದು ಹೇಳಿದ್ದಾರೆ. 

    ವಿಪಕ್ಷಗಳ ಕುರಿತು ಕಿಡಿ ಕಾರಿದ ಸಿಎಂ ವಿರೋಧ ಪಕ್ಷಗಳಿಗೆ ನಮ್ಮಲ್ಲಿನ ಬಿರುಕನ್ನು ಹುಡುಕುವುದೇ ದೊಡ್ಡ ಕೆಲಸವಾಗಿದೆ. ನಮ್ಮ ಎಲ್ಲಾ ಶಾಸಕರು, ನಾಯಕರು ಒಗ್ಗಟ್ಟಾಗಿದ್ದೇವೆ. ನಾಳೆಯಿಂದ ನಮ್ಮ ನಡುವೆ ಎಲ್ಲಾ ಸರಿಯಾಗಿದೆ. ಹೈಕಮಾಂಡ್‌ ಏನು ಹೇಳುತ್ತದೆಯೋ ಅದನ್ನೇ ನಾವು ಪಾಲಿಸುತ್ತೇವೆ ಎಂದು ಅವರು ಹೇಳಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ರಾಜ್ಯದ ಜನತೆಯ ವಿಶ್ವಾಸವೇ ನಮಗೆ ಮುಖ್ಯ. ಕಾಂಗ್ರೆಸ್‌ ಸರ್ಕಾರ ಅದನ್ನು ಮಾಡಲು ಬದ್ಧವಾಗಿದೆ. ರಾಜಕೀಯವಾಗಿ ನಾವು ಒಂದೇ ತೀರ್ಮಾನವನ್ನು ಹೊಂದಿದ್ದು, ಹೈಕಮಾಂಡ್‌ ನಿರ್ಧಾರವೇ ಅಂತಿಮ ಎಂದು ಅವರು ಹೇಳಿದ್ದಾರೆ. ಯಾವುದೇ ಗುಂಪು ರಾಜಕಾರಣಕ್ಕೆ ಅವಕಾಶವಿಲ್ಲ. ನಾವಿಬ್ಬರೂ ಒಟ್ಟಿಗೆ ಸೇರಿ ಸರ್ಕಾರ ರಚಿಸಿದ್ದೇವೆ. ಒಟ್ಟಿಗೆ ಕೆಲಸ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.

Recent Articles

spot_img

Related Stories

Share via
Copy link