ರಾಜ್ಯ ಸರ್ಕಾರ ಕೇಂದ್ರದ ಸಹಾಯ ಕೇಳಿಲ್ಲ :ಜೋಶಿ

ಹುಬ್ಬಳ್ಳಿ
 

    ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ವಿದೇಶದಿಂದ ಕರೆತರಲು ರಾಜ್ಯ ಸರ್ಕಾರ ಕೇಂದ್ರದ ಸಹಾಯ ಕೇಳಿದ್ದು ಸುಳ್ಳು ಎಂದು ಕೇಂದ್ರ ಸಚಿವ ಹಾಗೂ ಧಾರವಾಡ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿಯವರು ಹೇಳಿದರು.

    ಹುಬ್ಬಳ್ಳಿಯಲ್ಲಿ ಮತದಾನ ಬಳಿಕ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪೆನ್‌ಡ್ರೈವ್ ವಿಚಾರವಾಗಿ ಮಾತನಾಡಿದ ಅವರು, ಪ್ರಕರಣದ ಹಿಂದೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೈವಾಡವಿದೆ ಎಂದು ಕೆಲವರು ಆರೋಪಿಸಿದ್ದಾರೆ. ಈ ವಿಚಾರವಾಗಿಯೂ SIT ತನೆಖೆ ನಡೆಸಬೇಕು. ಕರ್ನಾಟಕ ರಾಜ್ಯ ಸರ್ಕಾರ ಪ್ರಕರಣವನ್ನು CBI ಗೆ ವಹಿಸಲು ಹಿಂದೇಟು ಹಾಕುತ್ತಿದೆ ಎಂದು ಅವರು ಆರೋಪಿಸಿದರು.

    ಇವರೂ ಏನೋ ತಪ್ಪು ಮಾಡಿರಬಹುದು. ಹೀಗಾಗಿ ಪ್ರಕರಣವನ್ನು ಸಿಬಿಐಗೆ ನೀಡುತ್ತಿಲ್ಲ. ಪ್ರಕರಣದ ಸಮಗ್ರ ತನಿಖೆ ಹಾಗೂ ಸತ್ಯಾಸತ್ಯತೆಯ ನಿಖತರೆಯ ದೃಷ್ಟಿಯಿಂದ ಪ್ರಕಣವನ್ನು ಸಿಬಿಐಗೆ ವಹಿಸಬೇಕು ಎಂದು ಅವರು ಆಗ್ರಹಿಸಿದರು.

    ಸಿಬಿಐಗೆ ಪ್ರಕರಣ ವಹಿಸಿ ಇಲ್ಲವೇ ಸಂಬಂಧಿಸಿದವರು ನೇರವಾಗಿ ನ್ಯಾಯಾಲಯದ ಮೊರೆ ಹೋಗಬೇಕು. ಇದರ ವಿನಃ ಕೇಂದ್ರ ಸರ್ಕಾರ ನೇರವಾಗಿ ಭಾಗಿ ಆಗಲು ಸಾಧ್ಯವಿಲ್ಲ. ಪ್ರಜ್ವಲ್ ವಿಚಾರದಲ್ಲಿ ಪಕ್ಷಪಾತ ಮಾಡುವ ಪ್ರಶ್ನೆಯೇ ಇಲ್ಲ. ಪ್ರಜ್ವಲ್ ರೇವಣ್ಣ ಅವರನ್ನು ವಿದೇಶದಿಂದ ಕರೆತರಲು ರಾಜ್ಯ ಸರ್ಕಾರ ಕೇಂದ್ರದ ಸಹಾಯ ಕೇಳಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

    ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಇದ್ದಾಗಲೇ ಈ‌ ಎಲ್ಲ ಕರ್ಮ ಕಾಂಡಗಳು ನಡೆದಿದೆ. ಅಲ್ಲದೆ, ನೀವು ಅಧಿಕಾರಕ್ಕೆ ಬಂದು ವರ್ಷ ಕಳೆದಿದೆ. ಇಷ್ಟು ದಿನ ಕತ್ತೆ ಕಾಯುತ್ತಿದ್ದೀರಾ? ಎಂದು ಜೋಶಿಯವರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap