ಅಬಕಾರಿ ಹಗರಣ : ಕೇಜ್ರಿವಾಲ್‌ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ:

    ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯವು ಜುಲೈ 3 ರವರೆಗೆ ವಿಸ್ತರಿಸಿದೆ.

   ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ನಿಯಾಯ್ ಬಿಂದು ಅವರು ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿದರು.

   ವಿಚಾರಣೆ ವೇಳೆ ಕೇಜ್ರಿವಾಲ್ ಪರ ವಾದ ಮಂಡಿಸಿದ ವಕೀಲರು, ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸುವಂತೆ ಇಡಿ ಸಲ್ಲಿಸಿದ್ದ ಅರ್ಜಿಯನ್ನು ವಿರೋಧಿಸಿದರು ಮತ್ತು ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಸಮರ್ಥಿಸುವ ಯಾವುದೇ ಆಧಾರಗಳಿಲ್ಲ ಎಂದು ಹೇಳಿದರು.

   ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ಮಾರ್ಚ್ 21ರಂದು ಇಡಿ ಬಂಧಿಸಿತ್ತು. ಚುನಾವಣಾ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಜೂನ್ 2 ರಂದು ಅವರು ಮತ್ತೆ ಶರಣಾಗಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap