ಅಬಕಾರಿ ನೀತಿ ಹಗರಣ :ಮನೀಶ್‌ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ…!

ನವದೆಹಲಿ:

    ದೆಹಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್‌ ಸಿಸೋಡಿಯಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಿ ದೆಹಲಿ ಕೋರ್ಟ್ ಶನಿವಾರ ಆದೇಶ ಹೊರಡಿಸಿದೆ.

    ದೆಹಲಿ ಅಬಕಾರಿ ನೀತಿಯ ಹಣ ಅಕ್ರಮ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಶುಕ್ರವಾರ 9ನೇ ಚಾರ್ಜ್‌ಶೀಟ್ ಸಲ್ಲಿಸಿದ್ದು, ವಿನೋದ್ ಚೌಹಾನ್ ಎನ್ನುವ ವ್ಯಕ್ತಿಯನ್ನು ಆರೋಪಿ ಎಂದು ಹೆಸರಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

    ಪ್ರಕರಣದ ತನಿಖೆಯ ಭಾಗವಾಗಿ ಚೌಹಾನ್ ಅವರನ್ನು ಮೇ ತಿಂಗಳಲ್ಲಿ ಬಂಧಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ಮುಖಂಡ ಅರವಿಂದ ಕೇಜ್ರಿವಾಲ್, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಸಂಸದ ಸಂಜಯ್ ಸಿಂಗ್, ಬಿಆರ್‌ಎಸ್ ಮುಖ್ಯಸ್ಥ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ ಕೆ.ಕವಿತಾ, ಉದ್ಯಮಿಗಳು ಸೇರಿದಂತೆ ಹಲವರನ್ನು ಬಂಧಿಸಿದ್ದು, ಚೌಹಾನ್ ಈ ಸಂಬಂಧ ಬಂಧನಕ್ಕೊಳಗಾದ 18ನೇ ಆರೋಪಿಯಾಗಿದ್ದಾರೆ

Recent Articles

spot_img

Related Stories

Share via
Copy link