ನವದೆಹಲಿ:
ಸುಪ್ರೀಂ ಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಜೀವ್ ಖನ್ನಾ ಅವರಿಗೆ ಪ್ರಮಾಣವಚನ ಬೋಧಿಸಿದರು, ಇಂದು ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಭಾಗಿಯಾಗಿದ್ದಾರೆ.
ಚುನಾವಣಾ ಬಾಂಡ್ ರದ್ದತಿ, ಕಣಿವೆ ರಾಜ್ಯ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ವಿಧಿ ರದ್ದತಿ ಎತ್ತಿ ಹಿಡಿದಂತಹ ಪ್ರಮುಖ ವಿಷಯಗಳ ತೀರ್ಪು ಪ್ರಕಟಿಸಿದ್ದ ನ್ಯಾ| ಸಂಜೀವ್ ಖನ್ನಾ ಅವರು 1960ರ ಮೇ 14ರಂದು ಜನಿಸಿದ್ದರಿ, ನ್ಯಾಯಮೂರ್ತಿ ಸಂಜೀವ್ ಖನ್ನಾ 1983ರಲ್ಲಿ, ದೆಹಲಿ ಬಾರ್ ಕೌನ್ಸಿಲ್ ನಲ್ಲಿ ವಕೀಲರಾಗಿದ್ದರು. ಬಳಿಕ ದೆಹಲಿ ಹೈಕೋರ್ಟ್ ಮತ್ತು ವಿವಿಧ ನ್ಯಾಯಮಂಡಳಿಗಳಲ್ಲಿ ಸೇವೆ ಸಲ್ಲಿಸಿದ ಅವರು, 2005ರಲ್ಲಿ ದೆಹಲಿ ಹೈಕೋರ್ಟ್ ನ ಹೆಚ್ಚುವರಿ ನ್ಯಾಯಾಧೀಶರಾಗಿ ಹಾಗೂ 2006ರಲ್ಲಿ ಖಾಯಂ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸಿದ್ದಾರೆ. ಈ ಮುನ್ನ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿದ್ದ ಬಿ.ವೈ. ಚಂದ್ರಚೂಢ್ ಅವರು ನಿನ್ನೆಯಷ್ಟೇ ನಿವೃತ್ತರಾದರು. ನೂತನ ಮುಖ್ಯ ನ್ಯಾಯಮೂರ್ತಿಯವರ ಅಧಿಕಾರಾವಧಿ 2025ರ ಮೇ 13ರ ವರೆಗೆ ಇರಲಿದೆ.