ದೆಹಲಿ ಅಬಕಾರಿ ನೀತಿ ಹಗರಣ : ಮೇ 14ರ ವರೆಗೆ ಕವಿತ ಬಂಧನ ವಿಸ್ತರಣೆ….!

ನವದೆಹಲಿ:

   ಆಪಾದಿತ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಮಂಗಳವಾರ ದೆಹಲಿ ನ್ಯಾಯಾಲಯ ಮೇ 14 ರವರೆಗೆ ವಿಸ್ತರಿಸಿದೆ. 

   ಸಿಬಿಐ ಮತ್ತು ಇ.ಡಿ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ತೆಲಂಗಾಣ ಎಂಎಲ್‌ಸಿಯ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಅವರ ಕಸ್ಟಡಿಯನ್ನು ವಿಸ್ತರಿಸಿ ಆದೇಶಿಸಿದ್ದಾರೆ.

   ವಿಚಾರಣೆಯ ಸಂದರ್ಭದಲ್ಲಿ, ಜಾರಿ ನಿರ್ದೇಶನಾಲಯವು ತನಿಖೆಯು ನಿರ್ಣಾಯಕ ಹಂತದಲ್ಲಿದೆ ಮತ್ತು ಕವಿತಾ ವಿರುದ್ಧ ಒಂದು ವಾರದೊಳಗೆ ಚಾರ್ಜ್ ಶೀಟ್ ಸಲ್ಲಿಸಬಹುದು ಎಂದು ನ್ಯಾಯಾಲಯಕ್ಕೆ ತಿಳಿಸಿತು. 

    ಸದ್ಯ ರದ್ದಾಗಿರುವ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ 46 ವರ್ಷದ ಬಿಆರ್‌ಎಸ್ ನಾಯಕಿ ಕವಿತಾ ಅವರನ್ನು ಮಾರ್ಚ್ 15ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನಿವಾಸದಿಂದ ಇ.ಡಿ ಅಧಿಕಾರಿಗಳು ಬಂಧಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ