35.10 ಲಕ್ಷ ರೈತರಿಗೆ ಕೃಷಿ ಸಾಲ ವಿತರಿಸಲು ಗುರಿ : ಸಚಿವ ಕೆ.ಎನ್. ರಾಜಣ್ಣ

ಬೆಂಗಳೂರು:

   2024-25ನೇ ಸಾಲಿಗೆ 35.10 ಲಕ್ಷ ರೈತರಿಗೆ ರೂ 25,000 ಕೋಟಿಗಳ ಅಲ್ಪಾವಧಿ ಕೃಷಿ ಸಾಲ ಮತ್ತು 0.90 ಲಕ್ಷ ರೈತರಿಗೆ ರೂ. 2,000.00 ಕೋಟಿಗಳ ಮಧ್ಯಮಾವಧಿ ಹಾಗೂ ಧೀರ್ಘಾವಧಿ ಕೃಷಿ ಸಾಲ ವಿತರಿಸುವ ಗುರಿ ನಿಗದಿಪಡಿಸಿದ್ದು, ರೂ. 2566.02 ಕೋಟಿಗಳ ಹೆಚ್ಚಿನ ಕೃಷಿ ಸಾಲ ವಿತರಿಸಲಾಗುವುದು ಎಂದು ಸಹಾಕಾರ ಸಚಿವ ಕೆ.ಎನ್. ರಾಜಣ್ಣ ಅವರು ತಿಳಿಸಿದರು.

   ವಿಧಾನ ಪರಿಷತ್ತಿನ ಅಧಿವೇಶನದ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಾಥಮಿಕ ಪತ್ತಿನ ಸಹಕಾರ ಸಂಘ / ಡಿ.ಸಿ.ಸಿ ಬ್ಯಾಂಕುಗಳ ಮೂಲಕ 2023-24ನೇ ಸಾಲಿನಲ್ಲಿ 29,26,910 ರೈತರಿಗೆ ರೂ. 22,982.10 ಕೋಟಿಗಳ ಬೆಳೆ ಸಾಲ ವಿತರಿಸಲಾಗಿದೆ.

   ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ / ಡಿ.ಸಿ.ಸಿ ಬ್ಯಾಂಕುಗಳ ಮೂಲಕ 2024-25ನೇ ಸಾಲಿನಲ್ಲಿ 35.10 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ರೂ. 25,000 ಕೋಟಿಗಳ ಅಲ್ಪಾವಧಿ ಕೃಷಿ ಸಾಲ ಮತ್ತು ಪಶುಸಂಗೋಪನೆಗೆ ದುಡಿಯುವ ಬಂಡವಾಳ ಸಾಲ ವಿತರಿಸಲು ಗುರಿ ಹೊಂದಲಾಗಿದೆ.

   ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ / ಡಿ.ಸಿ.ಸಿ ಬ್ಯಾಂಕುಗಳ ಮೂಲಕ 2024ನೇ ಜುಲೈ 6 ರ ವರೆಗೆ 7,80,363 ರೈತರಿಗೆ ರೂ. 6799.17 ಕೋಟಿಗಳ ಬೆಳೆ ಸಾಲ ವಿತರಿಸಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಸಾಲ ವಿತರಿಸಿದ ಮಾಹಿತಿ, ಡಿ.ಸಿ.ಸಿ ಬ್ಯಾಂಕುಗಳಲ್ಲಿರುವ ಬಂಡವಾಳ ಮತ್ತು ನಬಾರ್ಡ್ನ ಪುನರ್ಧನ ಆಧರಿಸಿ ಪ್ರತಿ ಜಿಲ್ಲೆಗೆ ಸರಾಸರಿ 1.13 ಲಕ್ಷ ರೈತರಿಗೆ ರೂ. 806.00 ಕೋಟಿಗಳ ಅಲ್ಪಾವಧಿ ಕೃಷಿ ಸಾಲ ವಿತರಿಸಲು ಉದ್ದೇಶಿಸಲಾಗಿದೆ.

   ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ / ಡಿ.ಸಿ.ಸಿ ಬ್ಯಾಂಕುಗಳು / ಪಿಕಾರ್ಡ್ ಬ್ಯಾಂಕುಗಳ ಮೂಲಕ 2023-24ನೇ ಸಾಲಿನಲ್ಲಿ 35 ಲಕ್ಷ ರೈತರಿಗೆ ರೂ. 25,000/- ಕೋಟಿಗಳಷ್ಟು ಸಾಲ ವಿತರಣೆ ಮಾಡುವ ಗುರಿ ಹೊಂದಲಾಗಿದ್ದು, 29,26,910 ರೈತರಿಗೆ ರೂ. 22,982.10 ಕೋಟಿಗಳ ಬೆಳೆ ಸಾಲ, 54,255 ರೈತರಿಗೆ ರೂ. 1517.77 ಕೋಟಿಗಳ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಸಾಲ ವಿತರಣೆ ಗುರಿ ಹೊಂದಲಾಗಿದ್ದು, ಹೀಗೆ ಒಟ್ಟು 29,81,165 ರೈತರಿಗೆ ರೂ. 24,499.87 ಕೋಟಿಗಳ ಕೃಷಿ ಸಾಲ ವಿತರಿಸಲಾಗಿದ್ದು, ಶೇಕಡ 98ರಷ್ಟು ಗುರಿ ಸಾಧನೆ ಮಾಡಲಾಗಿದೆ ಎಂದು ತಿಳಿಸಿದರು.

Recent Articles

spot_img

Related Stories

Share via
Copy link
Powered by Social Snap