ಮುಂದಿನ ಚುನಾವಣೆಗೆ ಸ್ಪರ್ಧಿಸಲ್ಲ : ಕೆಎನ್ ರಾಜಣ್ಣ

ತುಮಕೂರು: 

   ಮುಂದಿನ ಚುನಾವಣೆಗೆ ತಾವು ಸ್ಪರ್ಧಿಸುವುದಿಲ್ಲ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಶನಿವಾರ ಹೇಳಿದ್ದಾರೆ.ತುಮಕೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆಎನ್ ರಾಜಣ್ಣ, ‘ಮುಂಬರುವ ವಿಧಾನಸಭಾ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ.

   ಹಾಗಂತ ರಾಜಕೀಯ ನಿವೃತ್ತಿಯನ್ನು ಪಡೆಯುವುದಿಲ್ಲ. ಮುಂಬರುವ ವಿಧಾನಸಭಾ ಚುನಾವಣೆಗೆ ನಾನು ನಿಲ್ಲದಿದ್ದರೂ ಗೆಲ್ಲುವವರನ್ನು ಗೆಲ್ಲಿಸುತ್ತೇನೆ, ಸೋಲುವವರನ್ನು ಸೋಲಿಸುತ್ತೇನೆ ಎಂದು ಹೇಳಿದ್ದಾರೆ. ಅಂತೆಯೇ ಮುಂದಿನ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ ಎಂದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದರ್ಥವಲ್ಲ. ರಾಜಕೀಯದಿಂದ ನಿವೃತ್ತಿಯಾಗುವುದಿಲ್ಲ ಎಂದು ರಾಜಣ್ಣ ಸ್ಪಷ್ಟಪಡಿಸಿದರು.

 

   ಇದೇ ವೇಳೆ ಮಧುಗಿರಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸುತ್ತೇನೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಸೂಕ್ತ ಸಮಯದಲ್ಲಿ ಜಿಲ್ಲಾ ಕೇಂದ್ರವಾಗಲಿದೆ ಎಂದು ರಾಜಣ್ಣ ತಿಳಿಸಿದರು.

   ಮಧುಗಿರಿ ಜಿಲ್ಲಾ ಕೇಂದ್ರವಾಗಲು ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕಾಗಿದೆ. ಹಾಗೆಯೇ ಜಿಲ್ಲಾ ಮಟ್ಟದ ಕಚೇರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಎಲ್ಲವೂ ಲಭ್ಯ ಇರಬೇಕಾಗಿದೆ. ಹಾಗಾಗಿ ಸರಿಯಾದ ಸಮಯದಲ್ಲಿ ಮಧುಗಿರಿ ಜಿಲ್ಲಾಕೇಂದ್ರವಾಗಲಿದೆ.ಐತಿಹಾಸಿಕ ಪ್ರಸಿದ್ದ ಏಕಶಿಲಾಬೆಟ್ಟಕ್ಕೆ ಕೇಬಲ್ ಕಾರ್ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗಿದೆ. ಶೀಘ್ರದಲ್ಲೇ ಬೆಟ್ಟಕ್ಕೆ ಕೇಬಲ್ ಕಾರ್ ಅಳವಡಿಕೆಯಾಗಲಿದೆ. ರಾಯದುರ್ಗ-ದಾವಣಗೆರೆ ರೈಲು ಮಾರ್ಗ ಹಾಗೂ ಎತ್ತಿನ ಹೊಳೆ ಯೋಜನೆ ಇನ್ನೊಂದು ವರ್ಷದಲ್ಲಿ ಸಂಪೂರ್ಣಗೊಳ್ಳಲಿವೆ ಎಂದು ರಾಜಣ್ಣ ತಿಳಿಸಿದರು.

   ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದಲ್ಲಿ ಹೈಕಮಾಂಡ್ ಶಕ್ತಿಯುತವಾಗಿದೆ. ಹಾಗಾಗಿ ನಮ್ಮ ಪಕ್ಷದಲ್ಲಿ ಯಾವುದೇ ವಿಚಾರ ಬಂದರೂ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ. ಹೈಕಮಾಂಡ್ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದು ಸಿಎಂ ಹುದ್ದೆ ವಿಚಾರದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ರಾಜಣ್ಣ ಮಾರ್ಮಿಕವಾಗಿ ಉತ್ತರಿಸಿದರು.

   ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ. ಸಿದ್ದರಾಮಯ್ಯ ಮುಂದುವರಿಕೆ ಬಗ್ಗೆ ಅನುಮಾನ ಬೇಡ. ಕಾಂಗ್ರೆಸ್ ಬಿಜೆಪಿಗೆ ಹೈಕಮಾಂಡ್ ಇದೆ. ಜೆಡಿಎಸ್ ನ ಹೈಕಮಾಂಡ್ ಬೆಂಗಳೂರಿನ ಪದ್ಮನಾಭನಗರದಲ್ಲಿದೆ ಎರಡೂ ಪಕ್ಷದಲ್ಲಿ ಹೈಕಮಾಂಡ್ ಸ್ಟ್ರಾಂಗ್ ಇದೆ. ಬಿಜೆಪಿಯಲ್ಲಿ ಎಷ್ಟು ಬಾರಿ ಸಿಎಂ ಬದಲಾವಣೆ ಆಗಿದೆ. ಕಾಂಗ್ರೆಸ್ ನಲ್ಲೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.

Recent Articles

spot_img

Related Stories

Share via
Copy link