ದಾವಣಗೆರೆ:
ಇತ್ತೀಚೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ನಗರದ ಆದರ್ಶ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಭಾಗವಹಿಸಿ, ಪ್ರಥಮ ಸ್ಥಾನ ಪಡೆದು, ಚಿತ್ರದುರ್ಗದಲ್ಲಿ ನಡೆಯುವ ವಿಭಾಗೀಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಈ ಎಲ್ಲಾ ವಿಜೇತ ಕ್ರೀಡಾಪಟುಗಳಿಗೆ ಮುಖ್ಯ ಶಿಕ್ಷಕ ಸಿದ್ದೇಶ್ವರ.ಬಿ, ದೈಹಿಕ ಶಿಕ್ಷಕ ಶ್ರೀನಿವಾಸ್, ಸಂಸ್ಥೆಯ ಕಾರ್ಯದರ್ಶಿ ವಿ.ವೆಂಕಟೇಶ್, ಅಧ್ಯಕ್ಷ ಕೆ.ಗಂಗಪ್ಪ ಹಾಗೂ ಸಂಸ್ಥೆಯ ನಿರ್ದೇಶಕರು ಹಾಗೂ ಶಾಲಾ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ