ಕಾಂತಾರ ಎಫೆಕ್ಟ್: ಅರಣ್ಯದಲ್ಲಿ ಶೂಟ್ ಮಾಡುವವರಿಗೆ ಖಡಕ್ ನಿಯಮ

ಬೆಂಗಳೂರು :

    ‘ಕಾಂತಾರ ಚಾಪ್ಟರ್ 1’ ಹಾಗೂ ‘ಟಾಕ್ಸಿಕ್’ ಸಿನಿಮಾಗಳ ಶೂಟಿಂಗ್ ವೇಳೆ ಸಾಕಷ್ಟು ವಿವಾದ ಹುಟ್ಟಿಕೊಂಡಿತ್ತು. ‘ಟಾಕ್ಸಿಕ್’ ತಂಡದವರು ಮರ ಕಡಿದ ಆರೋಪ ಹೊತ್ತರೆ, ‘ಕಾಂತಾರ’ ತಂಡದವರು ಬಾಂಬ್ ಸ್ಫೋಟ್ ಮಾಡಿದ ಹಾಗೂ ಅರಣ್ಯದಲ್ಲಿ ಬೆಂಕಿ ಹಚ್ಚಿದ ಆರೋಪ ಎದುರಿಸಿದರು. ಇದು ಸರ್ಕಾರದ ಮಟ್ಟದಲ್ಲಿ ಚರ್ಚೆ ಆಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯದಲ್ಲಿ ಶೂಟ್ ಮಾಡುವವರಿಗೆ ಸರ್ಕಾರ ಹೊಸ ನಿಯಮ ಜಾರಿ ಮಾಡಿದೆ.

   ‘ಅರಣ್ಯ ಪ್ರದೇಶಗಳಲ್ಲಿ ವಿವಿಧ ಬಗೆಯ ಚಿತ್ರೀಕರಣಕ್ಕೆ ಸ್ಥಳೀಯ ಮಟ್ಟದ ಅಧಿಕಾರಿಗಳು ಅನುಮತಿಯನ್ನು ನೀಡುತ್ತಿದ್ದಾರೆ. ಇದರಿಂದ ಅರಣ್ಯ ಪ್ರದೇಶದ ಗೌಪ್ಯ ಮಾಹಿತಿಯು ಹೊರ ಜಗತ್ತಿಗೆ ದೊರೆಯುವ ಸಂಭವವಿರುತ್ತದೆ. ಅರಣ್ಯ ಮತ್ತು ವನ್ಯಜೀವಿಗಳ ಸೂಕ್ಷ್ಮತೆಯ ಅರಿವಿಲ್ಲದೆ ಪರಿಸರ ಹಾಗೂ ಜೀವ ವೈವಿಧ್ಯಕ್ಕೆ ದಕ್ಕೆ ಉಂಟಾಗುವ ಸಂಭವವಿರುತ್ತದೆ’ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ. 

‘ಅರಣ್ಯ ಹಾಗೂ ವನ್ಯ ಜೀವಿಗಳನ್ನು ಸಂರಕ್ಷಿಸಿ. ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಅರಣ್ಯ ಹಾಗೂ ವನ್ಯಜೀವಿಗಳನ್ನು ಉಳಿಸುವ ಹಿತದೃಷ್ಟಿಯಿಂದ, ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದ ವತಿಯಿಂದ ಅನುಮತಿ ಪಡೆಯಬೇಕು’ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.

Recent Articles

spot_img

Related Stories

Share via
Copy link