ಬಿಜೆಪಿ ಗೆ ಬೈ ಹೇಳಿ ಕಾಂಗ್ರೆಸ್ ಕೈ ಹಿಡಿಯುತ್ತಿರುವ ಸಿ. ಪಿ. ಯೋಗೇಶ್ವರ್

ಬೆಂಗಳೂರು:

     ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಸ್ಪರ್ಧಾಕಾಂಕ್ಷಿಯಾಗಿರುವ ಮಾಜಿ ಸಚಿವ ಸಿ.ಪಿ. ಯೋಗೀಶ್ವರ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪಕ್ಷ ಸೇರ್ಪಡೆ ಕುರಿತಂತೆ ಮಾತುಕತೆ ನಡೆಸಿದ್ದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಯಾಗುತ್ತಿದ್ದಾರೆ.

    ಈ ಮೂಲಕ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕೈ ಅಭ್ಯರ್ಥಿ ಯಾಗಿ ಸೈನಿಕ ಸ್ಪರ್ಧಿಸುವುದು ಖಚಿತವಾಗಿದ್ದು, ಅಧಿಕೃತ ಘೋಷಣೆಯಷ್ಟೇ ಆಗಬೇಕಿದೆ.ಸಿಎಂ ಭೇಟಿ ವೇಳೆಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಶಿವರಾಜ ತಂಗಡಗಿ, ಜಮೀರ್ ಅಹಮದ್ ಖಾನ್, ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಪೊನ್ನಣ್ಣ, ಮಾಜಿ ಸಂಸದ ಡಿ.ಕೆ. ಸುರೇಶ್ ಹಾಜರಿದ್ದರು.