ಕಲಬುರಗಿ: ಪ್ರೀತಿ ವಿಚಾರಕ್ಕೆ 10ನೇ ತರಗತಿಯ ಹುಡುಗ-ಹುಡುಗಿ ಆತ್ಮಹತ್ಯೆ!

ಕಲಬುರಗಿ: 

    ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಓದುತ್ತಿದ್ದ 10ನೇ ತರಗತಿಯ ಹದಿಹರೆಯದ ಬಾಲಕ ಮತ್ತು ಬಾಲಕಿ ಶನಿವಾರ ಬೆಳಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಹಿಂದುಳಿದ ವರ್ಗಕ್ಕೆ ಸೇರಿದ ಬಾಲಕ ಮತ್ತು ಅಲ್ಪಸಂಖ್ಯಾತ ಸಮುದಾಯದ ಬಾಲಕಿಯ ಮೃತದೇಹಗಳು ಮಲ್ಲಿ-ಐನಾಪುರ ರಸ್ತೆಯ ಹೊಲದಲ್ಲಿ ಒಂದೇ ಹಗ್ಗದಿಂದ ಮರಕ್ಕೆ ನೇತಾಡುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದ್ದು, ಅವರ ಕುಟುಂಬಗಳಿಗೆ ತಮ್ಮ ಪ್ರೀತಿ ವಿಚಾರ ತಿಳಿಸಿರಲಿಲ್ಲ. ಶುಕ್ರವಾರ ರಾತ್ರಿ ಹುಡುಗಿ ಮನೆಯಲ್ಲಿ ಮಲಗಿದ್ದಳು. ಆದರೆ ಶನಿವಾರ ಬೆಳಗ್ಗೆ ನೋಡಿದರೆ ಮನೆಯಲ್ಲಿ ಇರಲಿಲ್ಲ ಎಂದು ಕುಟುಂಬದ ಮೂಲಗಳು ತಿಳಿಸಿವೆ.

     ಬಯಲು ಶೌಚಕ್ಕೆ ಹೋಗಿದ್ದಾಳೆಂದು ಬಾಲಕಿ ಕುಟುಂಬ ಸದಸ್ಯರು ಭಾವಿಸಿದ್ದರು. ಆದರೆ ನಂತರ, ಹುಡುಗಿ ಮತ್ತು ಹುಡುಗ ಹೊಲದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಯಾರೋ ಅವರಿಗೆ ಮಾಹಿತಿ ನೀಡಿದರು. ಇಬ್ಬರ ಕುಟುಂಬ ಸದಸ್ಯರು ಸ್ಥಳಕ್ಕೆ ಬಂದು ಶವಗಳನ್ನು ತೆಗೆದುಕೊಂಡು ಅಂತಿಮ ವಿಧಿವಿಧಾನ ನೆರವೇರಿಸಿದರು.

   ಅಂತ್ಯಕ್ರಿಯೆಯ ನಂತರವೇ ಪೊಲೀಸರಿಗೆ ಘಟನೆಯ ಬಗ್ಗೆ ಮಾಹಿತಿ ಬಂದಿದ್ದು, ಎರಡೂ ಕುಟುಂಬಗಳು ಘಟನೆಯ ಬಗ್ಗೆ ಯಾರನ್ನೂ ಅನುಮಾನಿಸುವುದಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾರೆ.ಹುಡುಗಿಯ ಕುಟುಂಬ ಆಕೆಗೆ ಮದುವೆ ಮಾಡಲು ಯೋಜಿಸುತ್ತಿತ್ತು. ಇದರಿಂದ ಬೇಸತ್ತು ಬಾಲಕಿ ತನ್ನ ಗೆಳೆಯನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೂಲಗಳು ತಿಳಿಸಿವೆ.

Recent Articles

spot_img

Related Stories

Share via
Copy link