ಕಲಬುರಗಿ
ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತವರು ಜಿಲ್ಲೆಯ ಜಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಶನಿವಾರ ಸಂಜೆ ವಿದ್ಯುತ್ ಕೈ ಕೊಟ್ಟಿದ್ದರಿಂದ ಐಸಿಯುನಲ್ಲಿದ್ದ ರೋಗಿಗಳು ಪರದಾಡುವಂತಾಯಿತು. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಈಗ ವೈರಲ್ ಆಗಿದೆ. ವಿದ್ಯುತ್ ಕೈ ಕೊಟ್ಟ ಬಳಿಕ ಬ್ಯಾಟರಿ ಮೂಲಕ ಆಕ್ಸಿಜನ್ ಪೂರೈಕೆ ಮಾಡಲು ಮುಂದಾಗಿದ್ದರು. ಆದರೆ, ಬ್ಯಾಟರಿಗಳು ಬ್ಯಾಕ್ ಅಪ್ ಬಾರದ ಹಿನ್ನಲೆಯಲ್ಲಿ ಆಫ್ ಆಗಿತ್ತು. ಬಳಿಕ ವೈದ್ಯಕೀಯ ಸಿಬ್ಬಂದಿ ಹ್ಯಾಂಡ್ ಪಂಪ್ ಮೂಲಕ ಆಕ್ಸಿಜನ್ ಪೂರೈಕೆ ಮಾಡಿದ್ದಾರೆ. ವಿದ್ಯುತ್ ಕೈ ಕೊಟ್ಟಾಗ ಬ್ಯಾಟರಿ ಬ್ಯಾಕಪ್ ಇಲ್ಲದೆ ಆಕ್ಸಿಜನ್ ಕೊರತೆಯಿಂದ ರೋಗಿಗಳು ಪರದಾಡಿದ್ದರಿಂದ ರೋಗಿಗಳ ಕುಟುಂಬಸ್ಥರು ಆಸ್ಪತ್ರೆಯ ಆಡಳಿತ ಮಂಡಳಿ ವಿರುದ್ದ ಕಿಡಿ ಕಾರಿದ್ದಾರೆ.








