ಜ್ಯೂಸ್‌ ಎಂದು ಭಾವಿಸಿ ಕಳೆನಾಶಕ ಸೇವಿಸಿ ಬಾಲಕಿ ಸಾವು

ಬೆಂಗಳೂರು:

    ಮಕ್ಕಳು ಇರುವ ಮನೆಯಲ್ಲಿ ವಿಷಕಾರಿ  ರಾಸಾಯನಿಕ ದ್ರವ್ಯಗಳಿದ್ದರೆ ಅವುಗಳನ್ನು ಎಚ್ಚರಿಕೆಯಿಂದ ಮಕ್ಕಳ ಕೈಗೆ ಸಿಗದಂತೆ ಇಡದಿದ್ದರೆ ಅನಾಹುತ ಕಟ್ಟಿಟ್ಟ ಬುತ್ತಿ. ಬೆಂಗಳೂರಿನಲ್ಲಿ  ಇಂಥಹುದೇ ದುರಂತ ಸಂಭವಿಸಿದೆ. ಜ್ಯೂಸ್ ಎಂದು ತಿಳಿದು ಅಲೋವೆರಾ ಡಬ್ಬದಲ್ಲಿದ್ದ ಕಳೆನಾಶಕ  ಔಷಧಿ ಕುಡಿದು ಬಾಲಕಿಯೊಬ್ಬಳು  ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬ್ಯಾಟರಾಯನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಿಧಿಕೃಷ್ಣ (14) ಎನ್ನುವ ಬಾಲಕಿ ಹೀಗೆ ವಿಷ ಸೇವಿಸಿ ಸಾವನ್ನಪ್ಪಿದ್ದಾಳೆ.

    ಆರೋಗ್ಯ ಕಾಪಾಡಿಕೊಳ್ಳಲು ನಿಧಿ ಅಲೋವೆರಾ ಜ್ಯೂಸ್ ಕುಡಿಯುತ್ತಿದ್ದಳು. ಈ ನಡುವೆ ಕುಟುಂಬಸ್ಥರು ಅಲೋವೆರಾ ಜ್ಯೂಸ್ ಖಾಲಿಯಾದ ಡಬ್ಬದಲ್ಲಿ ಕಳೆನಾಶಕ ಔಷಧ ತುಂಬಿಟ್ಟಿದ್ದರು. ಮಾರ್ಚ್ 4ರಂದು ಜ್ಯೂಸ್ ಎಂದು ಭಾವಿಸಿ ನಿಧಿ ಹರ್ಬಿಸೈಡ್ ಔಷಧ ಕುಡಿದಿದ್ದಾಳೆ. ಅನಾರೋಗ್ಯ ತಲೆದೋರಿದ ಹಿನ್ನೆಲೆಯಲ್ಲಿ ತಕ್ಷಣ ನಿಧಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಾರ್ಚ್ 31ರಂದು ನಿಧಿ ಮೃತಪಟ್ಟಿದ್ದಾಳೆ. ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

Recent Articles

spot_img

Related Stories

Share via
Copy link