ಚೆನ್ನೈ :
‘ಕಲ್ಕಿ 2898 ಎಡಿ’ ಸಿನಿಮಾ ಜೂನ್ 27ರಂದು ವಿಶ್ವಾದ್ಯಂತ ರಿಲೀಸ್ ಆಯಿತು. ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಮಾಡಿದ ಗಳಿಕೆ ಬರೋಬ್ಬರಿ 1100 ಕೋಟಿ ರೂಪಾಯಿ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಈ ಸಿನಿಮಾ ಒಟಿಟಿಗೆ ಕಾಲಿಡಲು ರೆಡಿ ಆಗಿದೆ ಎಂದು ವರದಿ ಆಗಿದೆ. ಆಗಸ್ಟ್ 23ರಂದು ಈ ಸಿನಿಮಾ ಒಟಿಟಿಯಲ್ಲಿ ಪ್ರಸಾರ ಕಾಣಲಿದೆ. ಈ ವಿಚಾರ ತಿಳಿದು ಫ್ಯಾನ್ಸ್ ಖುಷಿ ಪಟ್ಟಿದ್ದಾರೆ. ಥಿಯೇಟರ್ನಲ್ಲಿ ಮಿಸ್ ಮಾಡಿಕೊಂಡವರು ಈ ಚಿತ್ರವನ್ನು ಒಟಿಟಿಯಲ್ಲಿ ವೀಕ್ಷಿಸಬಹುದು.
‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಪ್ರಭಾಸ್ ನಟಿಸಿದ್ದಾರೆ. ಈ ಸಿನಿಮಾ ಮೂಲಕ ನಿರ್ದೇಶಕ ನಾಗ್ ಅಶ್ವಿನ್ ಅವರು ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದ್ದಾರೆ. ಈ ಸಿನಿಮಾದಲ್ಲಿ ಕಮಲ್ ಹಾಸನ್, ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ ಮೊದಲಾದವರು ನಟಿಸಿದ್ದಾರೆ. ಈ ಚಿತ್ರದಿಂದ ಪ್ರಭಾಸ್ ಅವರ ಖ್ಯಾತಿ ಹೆಚ್ಚಾಗಿದೆ. ಈ ಸಿನಿಮಾನ ಈಗ ಒಟಿಟಿಯಲ್ಲಿ ನೋಡಬೇಕು ಎಂದುಕೊಂಡವರಿಗೆ ಗುಡ್ ನ್ಯೂಸ್ ಸಿಕ್ಕಿದೆ.
‘ಕಲ್ಕಿ 2898 ಎಡಿ’ ಚಿತ್ರವನ್ನು ದೊಡ್ಡ ಮೊತ್ತಕ್ಕೆ ಅಮೇಜಾನ್ ಪ್ರೈಮ್ ವಿಡಿಯೋ ಖರೀದಿ ಮಾಡಿದೆ. ಈ ಸಿನಿಮಾದ ಹಿಂದಿ ವರ್ಷನ್ ಹಕ್ಕು ನೆಟ್ಫ್ಲಿಕ್ಸ್ ಕೈ ಸೇರಿದೆ. ತೆಲುಗು, ಕನ್ನಡ, ಮಲಯಾಳಂ ಹಾಗೂ ತಮಿಳು ವರ್ಷನ್ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಲಭ್ಯವಿರಲಿದ್ದು, ಹಿಂದಿ ವರ್ಷನ್ ನೆಟ್ಫ್ಲಿಕ್ಸ್ನಲ್ಲಿ ಪ್ರಸಾರ ಕಾಣಲಿದೆ. ಎರಡೂ ಒಂದೇ ದಿನ ಪ್ರದರ್ಶನ ಕಾಣಲಿದೆ.
ಕಳೆದ ವಾರ ಬ್ಯಾಕ್ ಟು ಬ್ಯಾಕ್ ಸಿನಿಮಾಗಳು ಒಟಿಟಿಯಲ್ಲಿ ಪ್ರಸಾರ ಕಂಡಿದೆ. ಈಗ ‘ಕಲ್ಕಿ 2898 ಎಡಿ’ ಸಿನಿಮಾ ಥಿಯೇಟರ್ನಲ್ಲಿ ರಿಲೀಸ್ ಆದ ಸುಮಾರು ಎರಡು ತಿಂಗಳ ಬಳಿಕ ಒಟಿಟಿಗೆ ಕಾಲಿಡುತ್ತಿದೆ. ಈ ಚಿತ್ರವನ್ನು ಒಟಿಟಿಯಲ್ಲಿ ವೀಕ್ಷಿಸಲು ಫ್ಯಾನ್ಸ್ ಕಾದಿದ್ದಾರೆ. ಅಶ್ವಿನಿ ದತ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ