ಕನಕ ಜಯಂತಿ ಸರಳ ಆಚರಣೆ

ತುಮಕೂರು:

ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸಂತಶ್ರೇಷ್ಠ ಕನಕದಾಸ ಜಯಂತಿಯನ್ನು ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಯಿತು.

75ನೇ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಾಳಿದಾಸ ವಿದ್ಯಾ ವರ್ಧಕ ಸಂಘ ಹಾಗೂ ತುಮಕೂರು ಜಿಲ್ಲೆ ಸಮಸ್ತ ಕುರುಬರ ಸಂಘಗಳ ಸಂಯುಕ್ತಾಶ್ರಯದಲ್ಲಿ
ನಗರದ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿಂದು ಸಂತಶ್ರೇಷ್ಠ ಕನಕದಾಸ ಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ನಗರ ಶಾಸಕ ಜಿ. ಬಿ. ಜ್ಯೋತಿಗಣೇಶ್, ಡಿ.ಡಿ.ಪಿ.ಐ. ಸಿ. ನಂಜಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀಧರ್, ತಹಶೀಲ್ದಾರ್ ಮೋಹನ್, ರೇಷ್ಮೆ ಇಲಾಖೆ ನಿರ್ದೇಶಕ ವೈ. ಕೆ. ಬಾಲಕೃಷ್ಣ, ಕಾಳಿದಾಸ ವಿದ್ಯಾ ವರ್ಧಕ ಸಂಸ್ಥೆಯ ಅಧ್ಯಕ್ಷ ಮಂಜುನಾಥ್ ಬೇವಿನಹಳ್ಳಿ, ಶ್ರೀ ಬಿಂದು ಶೇಖರ ಮಹಾ ಸ್ವಾಮೀಜಿ, ಇಂದ್ರ ಕುಮಾರ್, ಲಕ್ಷ್ಮೀ ನರಸಿಂಹರಾಜ, ಶ್ರೀನಿವಾಸ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೇಲ್ವಿಚಾರಕ ಸುರೇಶ್ ಸೇರಿದಂತೆ ಕುರುಬ ಸಮುದಾಯದ ಮುಖಂಡರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link