ಗುವಾಹಟಿ:
ಅಸ್ಸಾಂನ ಟಿನ್ಸುಕಿಯಾ ಜಿಲ್ಲೆಯಲ್ಲಿಯ ಬಾಗ್ಜನ್ ನ ಅನಿಲ ಬಾವಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದ ಇಬ್ಬರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ.
ಅನಿಲ ಬಾವಿಯಲ್ಲಿ ಕಳೆದ 14 ದಿನಗಳಿಂದ ಅನಿಲ ಸೋರಿಕೆಯಾಗುತ್ತಿತ್ತು. ಸ್ಥಳದಲ್ಲಿ ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್ಎಫ್) ಹಾಗೂ ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯ ಹಾಗೂ ಬೆಂಕಿ ನಿಯಂತ್ರಣ ಮಾಡುತ್ತಿದೆ. ಈ ವೇಳೆ ನಾಪತ್ತೆಯಾಗಿದ್ದ ಇಬ್ಬರು ಅಗ್ನಿಶಾಮಕ ಸಿಬ್ಬಂದಿಯು ಇಂದು ಶವವಾಗಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೀಗ ರಾಜ್ಯ ಸರ್ಕಾರದ ಮನವಿ ಮೇರೆಗೆ ಕೇಂದ್ರ ಸರ್ಕಾರ ಭಾರತೀಯ ವಾಯುಪಡೆ ಹಾಗೂ ಸೇನಾಪಡೆಗಳನ್ನು ರವಾನಿಸಿದ್ದು, ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳೂ ಕೂಡ ಕೈಜೋಡಿಸಿವೆ.
ಪ್ಯಾರಾಮಿಲಿಟರಿ ಪಡೆಗಳೂ ಘಟನಾ ಪ್ರದೇಶವನ್ನು ಸುತ್ತುವರೆದಿದ್ದು, ಕಾರ್ಯಾಚರಣೆ ನಡೆಸುತ್ತಿವೆ ಎಂದು ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/06/Fire.jpg)