ಪದವಿ ಶಿಕ್ಷಣದಲ್ಲಿ ಕನ್ನಡ ಕಡ್ಡಾಯವಲ್ಲ : ಕೇಂದ್ರ ಸರ್ಕಾರದಿಂದ ಹೈಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಕೆ!

ಬೆಂಗಳೂರು :

ಪದವಿ ಶಿಕ್ಷಣದಲ್ಲಿ  ಕನ್ನಡ ಭಾಷೆ ಸೇರಿದಂತೆ ಯಾವುದೇ ಭಾಷೆ ಕಲಿಕೆ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ  ಕರ್ನಾಟಕ ಹೈಕೋರ್ಟ್ ಗೆ  ಪ್ರಮಾಣ ಪತ್ರ ಸಲ್ಲಿಸಿದೆ.

ರಾಷ್ಟ್ರೀಯ ಶಿಕ್ಷಣ ನೀತಿ-2020 (NEP) ಹಾಗೂ ಅದರ ನಿಯಮಗಳಲ್ಲಿ ಕನ್ನಡ ಸೇರಿದಂತೆ ಯಾವುದೇ ಭಾಷೆಯನ್ನು ಪದವಿ ಶಿಕ್ಷಣದಲ್ಲಿ ಕಡ್ಡಾಯಗೊಳಿಸುವ ಸಂಬಂಧ ಉಲ್ಲೇಖಗಳಲ್ಲಿ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದು, ಕರ್ನಾಟಕ ಹೈಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿದೆ. ಇದರಿಂದ ಪದವಿ ಹಂತದಲ್ಲಿ ಭಾಷೆಯಾಗಿ ಕನ್ನಡ ಕಲಿಕೆಯನ್ನು ಕಡ್ಡಾಯ ಮಾಡಿರುವ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ.

ಪದವಿ ಶಿಕ್ಷಣದಲ್ಲಿ ಕನ್ನಡ ಕಡ್ಡಾಯವಲ್ಲ ಎಂಬ ಕುರಿತಂತೆ ಹೈಕೋರ್ಟ್ ಪ್ರತಿಕ್ರಿಯೆ ನೀಡಿದ್ದು, ಕೇಂದ್ರ ಸರ್ಕಾರವೇ ಈ ಸಂಬಂಧ ಸ್ಪಷ್ಟನೆ ನೀಡಿ ಪ್ರಮಾಣಪತ್ರ ಸಲ್ಲಿಸಿದ್ದು, ಪದವಿ ಶಿಕ್ಷಣದಲ್ಲಿ ಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯದ ಕುರಿತು ನಿಲುವನ್ನು ಮರುಪರಿಶೀಲಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲಾಗುವುದು ಎಂದು ತಿಳಿಸಿದೆ.

ಪದವಿ ಶಿಕ್ಷಣದಲ್ಲಿ ಭಾಷೆಯಾಗಿ ಕನ್ನಡ ಕಡ್ಡಾಯ ಕಲಿಕೆ ಆದೇಶವನ್ನು ವಿರೋಧಿಸಿ ಸಂಸ್ಕೃತಿ ಭಾರತಿ ಟ್ರಸ್ಟ್ ಹಾಗೂ ಕೆಲ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಮುಖ್ಯ ನ್ಯಾ. ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿದೆ.

ಈ ವೇಳೆ ವಿದ್ಯಾರ್ಥಿಗಳ ಪರ ವಾದ ಮಂಡಿಸಿದ ವಕೀಲರು, ಎನ್ ಇಪಿ ಮತ್ತರದ ನಿಯಮಗಳಲ್ಲಿ ಯಾವುದೇ ಭಾಷೆಯನ್ನು ಕಡ್ಡಾಯಗೊಳಿಸುವ ಸಂಬಂಧ ಉಲ್ಲೇಖಗಳಿಲ್ಲ ಎಂದು ಕೇಂದ್ರ ಸರ್ಕಾರ ತನ್ನ ಪ್ರಮಾಣ ಪತ್ರದಲ್ಲಿ ಸ್ಪಷ್ಟಪಡಿಸಿದೆ. ಹೀಗಾಗಿ ಪದವಿ ಹಂತದಲ್ಲಿ ಕನ್ನಡ ಕಡ್ಡಾಯವಲ್ಲ ಎಂದು ಹೇಳಿದ್ದಾರೆ.

           ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap