ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಿಲಿಂಡರ್ ಸ್ಫೋಟ : 8 ಮಂದಿ ದಾರುಣ ಸಾವು!!

ಮುಂಬೈ:

       ಸಿಲಿಂಡರ್​ ಸ್ಫೋಟಗೊಂಡು ಸುಮಾರು 8 ಜನ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಧುಲೆ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ನಡೆದಿದೆ.

      ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿದ ವೇಳೆ 100 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಹಲವು ಸಿಲಿಂಡರ್​ಗಳು ಸ್ಫೋಟಗೊಂಡು ಈ ದುರ್ಘಟನೆ ಸಂಭವಿಸಿದ್ದು, ಮಾಹಿತಿ ಪಡೆದ ನಾಲ್ಕು ಅಗ್ನಿಶಾಮಕ ದಳದ ವಾಹನಗಳು ಘಟನಾ ಸ್ಥಳಕ್ಕೆ ಧಾವಿಸಿವೆ.

      ಇಲ್ಲಿಯವರೆಗೆ 8 ಮಂದಿ ಮೃತದೇಹಗಳನ್ನು ಹೊರಕ್ಕೆ ತೆಗೆಯಲಾಗಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ ಶಿರ್​ಪುರ ಪೊಲೀಸ್​ ಠಾಣೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap