ವಿಶಾಖಪಟ್ಟಣಂ:
ಆಂಧ್ರದ ವಿಶಾಖಪಟ್ಟಣ ಜಿಲ್ಲೆಯ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರುಪಾಯಿ ಪರಿಹಾರವನ್ನು ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದಾರೆ.
ಇಂದು ಮುಂಜಾನೆ ಸುಮಾರು 3 ಗಂಟೆಗೆ ವಿಶಾಖ ಪಟ್ಟಣಂನ ಗೋಪಾಲಪಟ್ಟಣದ ನಾಯ್ಡು ತೋಟಾ ಸಮೀಪದಲ್ಲಿನ ಆರ್ ಆರ್ ವೆಂಕಟಪುರಂನಲ್ಲಿರುವ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ವಿಷಾನಿಲ ಸೋರಿಕೆಯಾದ ಪರಿಣಾಮ, 13 ಜನರು ಸಾವನ್ನಪ್ಪಿದ್ದರು. 300ಕ್ಕೆ ಹೆಚ್ಚು ಜನರು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದರು.
ಈ ಕುರಿತಂತೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಜಿ ಜಗಮೋಹನ್ ರೆಡ್ಡಿ, ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಸ್ ವಿಷಾನಿಲ ದುರಂತದಲ್ಲಿ ಇದುವರೆಗೆ 13 ಜನರು ಸಾವನ್ನಪ್ಪಿದ್ದಾರೆ. ನೂರಾರು ಜನರು ಅಸ್ವಸ್ಥರಾಗಿದ್ದಾರೆ. ವಿಷಾನಿಲ ಸೇವಿಸಿದ ಸಾವನ್ನಪ್ಪಿದವರ ಕುಟುಂಬಕ್ಕೆ 1 ಕೋಟಿ ಪರಿಹಾರವನ್ನು ನೀಡಲಾಗುತ್ತದೆ. ತೀವ್ರವಾಗಿ ಅಸ್ವಸ್ಥಗೊಂಡವರಿಗೆ 10 ಲಕ್ಷ ಪರಿಹಾರವನ್ನು ನೀಡಲಾಗುತ್ತದೆ ಎಂಬುದಾಗಿ ಪರಿಹಾರದ ಹಣವನ್ನು ಘೋಷಣೆ ಮಾಡಿದರು.
ಇದೊಂದು ಘೋರ ದುರಂತವಾಗಿದೆ. ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಣಿಸಿದೆ.ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಸ್ ಸುತ್ತಮುತ್ತಲಿನ ಗ್ರಾಮಸ್ಥರನ್ನು ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯ ಭರದಿಂದ ಸಾಗಿದೆ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ