ಜಲಗಾಂವ್ :
ಮದುವೆಯಿಂದ ಹಿಂತಿರುಗುವಾಗ ಅಪಘಾತ : 10 ಮಂದಿಯ ದಾರುಣ ಸಾವು!!
ಕ್ರೂಸರ್ ಮತ್ತು ಡಂಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಿಂದಾಗಿ ಮದುವೆ ಮುಗಿಸಿ ಹೋಗುತ್ತಿದ್ದ 10 ಮಂದಿ ಮಸಣ ಸೇರಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಮಹಾರಾಷ್ಟ್ರದ ಜಲಗಾಂವ್ನ ಚಿಂಚೋಳಿಯಲ್ಲಿ ನಡೆದ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ವೇಳೆ ಮುಕ್ತಿನಗರದ ಬಳಿ ಈ ಅಪಘಾತ ನಡೆದಿದೆ. ಪರಿಣಾಮ ಸ್ಥಳದಲ್ಲೇ 10 ಮಂದಿ ಸಾವನ್ನಪ್ಪಿ, 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಗಾಯಾಳುಗಳನ್ನ ಚಿಕಿತ್ಸೆಗಾಗಿ ಭೂಸವಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ