ರಾಜಸ್ಥಾನ :
ಬಸ್ ಮತ್ತು ಟ್ರಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಿಂದಾಗಿ 10 ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಕಾನೇರ್ ಜಿಲ್ಲೆಯಲ್ಲಿ ನಡೆದಿದೆ.
Rajasthan: 10 people killed, 20-25 injured in collision between a bus and truck on National Highway 11 near Shri Dungargarh in Bikaner district pic.twitter.com/Pcfc42xdix
— ANI (@ANI) November 18, 2019
ಪ್ರಯಾಣಿಕರು ಇದ್ದ ಬಸ್ ಜಯಪುರದಿಂದ ಬಿಕನೇರ್ಗೆ ತೆರಳುತ್ತಿತ್ತು. ದುಂಗರ್ಹ ಪ್ರದೇಶದಲ್ಲಿ ಬಸ್ ಟ್ರಕ್ಗೆ ಡಿಕ್ಕಿ ಹೊಡೆಯಿತು. ಪರಿಣಾಮ 10 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 20ರಿಂದ 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮೃತದೇಹಗಳನ್ನು ಸ್ಥಳೀಯ ಪಿಬಿಎಂ ಆಸ್ಪತ್ರೆಗೆ ಶವ ಪರೀಕ್ಷೆಗೆ ಕೊಂಡೊಯ್ಯಲಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ