ಮಹಾರಾಷ್ಟ್ರ:
ಕೃಷ್ಣಾ ನದಿ ಪ್ರವಾಹದಲ್ಲಿ ರಕ್ಷಣಾ ದೋಣಿ ಮುಳುಗಿ 11 ಮಂದಿ ಸಾವಿಗೀಡಾಗಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಪಟ್ಟಣದಲ್ಲಿ ನಡೆದಿದೆ.
National Disaster Response Force (NDRF) teams continue rescue operations in flood-affected Satara district. #maharashtrafloods pic.twitter.com/SyFpRiD1VL
— ANI (@ANI) August 8, 2019
ಭಾರೀ ಪ್ರವಾಹಕ್ಕೆ ಸಿಲುಕಿದ್ದ ಜನರನ್ನು ರಕ್ಷಿಸಲು ತೆರಳಿದ್ದ ಬೋಟ್ 30-31 ಜನರನ್ನು ರಕ್ಷಿಸಿ ಕರೆತರುತ್ತಿದ್ದಾಗ ಮುಳುಗಿದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಲ್ವರು ಮಹಿಳೆಯರು, ಮೂವರು ಪುರುಷರು ಹಾಗೂ ಇಬ್ಬರು ಮಕ್ಕಳು ಸೇರಿ 9 ಮಂದಿಯ ಮೃತದೇಹವನ್ನು ವಶಕ್ಕೆ ಪಡೆಯಲಾಗಿದ್ದು, ಉಳಿದ ಎರಡು ಮೃತದೇಹಗಳಿಗಾಗಿ ರಕ್ಷಣಾ ಕಾರ್ಯ ಭರದಿಂದ ಸಾಗಿದೆ.
ಮಹಾರಾಷ್ಟ್ರದಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿ ತುಂಬಿ ಹರಿಯುತ್ತಿದೆ. ನದಿ ಪಾತ್ರದ ಗ್ರಾಮಗಳಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಎದುರಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ