ನವದೆಹಲಿ:
ಲಾಕ್ ಡೌನ್ ಸಡಿಲಿಕೆ ಬೆನ್ನಲ್ಲೇ ದೇಶದಲ್ಲಿ ಸೊಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡು ಬರುತ್ತಿದ್ದು, ಕಳೆದ 24 ಗಂಟೆಯಲ್ಲಿ ಈ ಮಹಾಮಾರಿ 137 ಮಂದಿಯನ್ನು ಬಲಿ ಪಡೆದುಕೊಂಡಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಬೆಳಗ್ಗೆ ಅಂಕಿ-ಅಂಶ ಬಿಡುಗಡೆ ಮಾಡಿದ್ದು, ದೇಶದಲ್ಲಿ ಕೊರೋನಾ ಪೀಡಿತರ ಸಂಖ್ಯೆ 1,25,101ಕ್ಕೆ ತಲುಪಿದೆ. ಇನ್ನು ಶುಕ್ರವಾರ ಮಹಾಮಾರಿ 137 ಮಂದಿಯನ್ನು ಬಲಿ ಪಡೆದುಕೊಂಡಿದ್ದು, ಈ ವರೆಗೂ ಸಾವನ್ನಪ್ಪಿದವರ ಸಂಖ್ಯೆ 3720ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ 48,534 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ,
ಕಳೆದ 4 ದಿನದಲ್ಲಿ ಸುಮಾರು 25 ಸಾವಿರ ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ