ಪುಣೆ :
ಭಾರೀ ಮಳೆಯಿಂದ 60 ಅಡಿ ಉದ್ದದ ಕಾಂಪೌಂಡ್ ಗೋಡೆ ಕುಸಿದು ಕನಿಷ್ಠ 15 ಜನರು ಮೃತಪಟ್ಟಿರುವ ದುರ್ಘಟನೆ ಪುಣೆ ಸಮೀಪದ ಕೊಂಧ್ವಾ ಪ್ರದೇಶದಲ್ಲಿ ಶನಿವಾರ ಸಂಭವಿಸಿದೆ.
Pune: 14 people have died in Kondhwa wall collapse incident. Rescue operations are underway. #Maharashtra pic.twitter.com/5XdHinkjCu
— ANI (@ANI) June 29, 2019
ಪುಣೆಯಲ್ಲಿ ಶುಕ್ರವಾರ ರಾತ್ರಿಯಿಂದೀಚೆಗೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗೋಡೆ ಕುಸಿದಿದ್ದು, ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರಿಗಾಗಿ ಈ ಗೋಡೆ ಪಕ್ಕದಲ್ಲೇ ಗುಡಿಸಲುಗಳನ್ನು ನಿರ್ಮಿಸಿಕೊಡಲಾಗಿತ್ತು. ಮಧ್ಯರಾತ್ರಿ ಸುಮಾರು 1.45ರ ವೇಳೆ ಕಾಂಪೌಂಡ್ ಗೋಡೆ ನೆಲಕ್ಕುರುಳಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತಪಟ್ಟ 15 ಮಂದಿಯಲ್ಲಿ 9 ಮಂದಿ ಪುರುಷರು, ನಾಲ್ವರು ಮಹಿಳೆಯರು ಮತ್ತು ನಾಲ್ಕು ಮಕ್ಕಳು ಸೇರಿದ್ದಾರೆ. ಎನ್‌ಡಿಆರ್‌ಎಫ್ ಸಿಬ್ಬಂದಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಕಳಪೆ ದರ್ಜೆಯ ನಿರ್ಮಾಣ ಹಾಗೂ ನಿರ್ಮಾಣ ಕಂಪನಿಯ ನಿರ್ಲಕ್ಯ್ಷವೇ ಗೋಡೆ ಕುಸಿತಕ್ಕೆ ಕಾರಣ ಎಂದು ಅವರು ತಿಳಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ರಾಜ್ಯ ಸರಕಾರ ಎಲ್ಲ ನೆರವೂ ನೀಡಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ