ಭಾರೀ ಮಳೆಗೆ ಗೋಡೆ ಕುಸಿದು 18 ಮಂದಿ ಸಾವು!!

ಮುಂಬೈ:

      ಭಾರಿ ಮಳೆಯ ಹಿನ್ನೆಲೆಯಲ್ಲಿ ಗೋಡೆ ಕುಸಿದ ಪರಿಣಾಮ 13 ಮಂದಿ ಮೃತಪಟ್ಟಿರುವ ಘಟನೆ ಪೂರ್ವ ಮಲಾಡ ಭಾಗದ ಪಿಂಪ್ರಿಪಾಡದಲ್ಲಿ ನಡೆದಿದೆ. 

      ಘಟನೆಯಲ್ಲಿ 80 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಬೈ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚುತ್ತಿರುವುದು ಇಂತಹ ಘಟನೆಗಳಿಗೆ ಕಾರಣವಾಗಿದೆ.

      ಕಟ್ಟಡದ ಅವಶೇಷಗಳಡಿ ಇನ್ನಷ್ಟು ಜನರು ಸಿಲುಕಿಕೊಂಡಿರುವ ಸಾಧ್ಯತೆ ಇದ್ದು, ಎನ್‌ಡಿಆರ್‌ಎಫ್ ಹಾಗೂ ಇತರೆ ತಂಡದಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

      ಇನ್ನು ರೈಲ್ವೆ ಹಳಿಗಳಲ್ಲಿ ನೀರು ಪ್ರವೇಶಿಸುವುದರಿಂದ ಸ್ಥಳೀಯ ರೈಲುಗಳನ್ನು ಸೀಮಿತ ಸ್ಥಳಗಳಲ್ಲಿ ಮಾತ್ರ ಓಡಿಸಲು ತೀರ್ಮಾನಿಸಲಾಗಿದೆ. ಮಧ್ಯ ಮತ್ತು ಪಶ್ಚಿಮ ರೈಲ್ವೆಗಳಲ್ಲಿ 20 ಕ್ಕೂ ಹೆಚ್ಚು ದೂರದ ರೈಲುಗಳನ್ನು ಭಾರೀ ಮಳೆಯಿಂದಾಗಿ ಮುಂಬೈ ಸಮೀಪದ ನಿಲ್ದಾಣದಲ್ಲಿ ನಿಲ್ಲಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಲಾಗಿದೆ.

      ಭಾರತದ ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವುದರಿಂದ ಅಧಿಕಾರಿಗಳು ಮಂಗಳವಾರ ಮುಂಬಯಿಯಲ್ಲಿ ಸಾರ್ವಜನಿಕ ರಜಾದಿನವೆಂದು ಘೋಷಿಸಿದ್ದಾರೆ.

      ಏತನ್ಮಧ್ಯೆ ಮುಂಬೈ ಹಾಗೂ ಸುತ್ಮುತ್ತಲಿನ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಸೂಚನೆ ನೀಡಿದ ಕಾರಣದಿಂದ ಇಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.

      ಮಹಾರಾಷ್ಟ್ರದ ಪುಣೆಯಲ್ಲಿ ಭಾರೀ ಮಳೆಗೆ ಅಪಾರ್ಟ್‌ಮೆಂಟ್‌ನ ಕಾಂಪೌಂಡ್‌ ಕುಸಿದು 15 ಕೂಲಿ ಕಾರ್ಮಿಕರು ಸತ್ತ ಘಟನೆ ನಡೆದ ಬೆನ್ನಲ್ಲೇ, ಮುಂಬೈನಲ್ಲಿ ಮತ್ತೆ ಈ ರೀತಿಯ ಪ್ರಕರಣ ವರದಿಯಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link