ಅಬುದಾಭಿ:
ಕ್ರಿಸ್ ಮಸ್ ಹಬ್ಬವನ್ನು ಆಚರಿಸಲೆಂದು ದುಬೈಗೆ ತೆರಳಿದ್ದ ಭಾರತೀಯ ಮೂಲದ ವಿದ್ಯಾರ್ಥಿಗಳಿಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ರೋಹಿತ್ ಕೃಷ್ಣಕುಮಾರ್(19) ಹಾಗೂ ಶರತ್ ಕುಮಾರ್ (21) ಮೃತಪಟ್ಟ ವಿದ್ಯಾರ್ಥಿಗಳು. ರೋಹಿತ್ ಹಾಗೂ ಶರತ್ ಮೂಲತಃ ಕೇರಳದವರಾಗಿದ್ದು, ಕ್ರಿಸ್ಮಸ್ ಪಾರ್ಟಿಯಲ್ಲಿ ಭಾಗಿಯಾಗಲು ಹೋಗಿದ್ದರು.
ರೋಹಿತ್ ಕೃಷ್ಣಕುಮಾರ್ ಲಂಡನ್ ನಲ್ಲಿ ಶಿಕ್ಷಣ ಪಡೆಯುತ್ತಿದ್ದು, ಶರತ್ ಕುಮಾರ್ ಅಮೇರಿಕಾದಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿದ್ದನು. ಕ್ರಿಸ್ ಮಸ್ ಹಬ್ಬದ ಸಂಭ್ರಮಾಚರಣೆಗೆ ಇವರಿಬ್ಬರೂ ದುಬೈನಲ್ಲಿ ಭೇಟಿಯಾಗಿದ್ದರು. ಆದರೆ ನಸುಕಿನ ಜಾವ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ