ಶ್ರೀನಗರ :
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾಪಡೆಗಳೊಂದಿಗೆ ಇಂದು ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರಗಾಮಿಗಳು ಹತರಾಗಿದ್ದಾರೆ.
ಪುಲ್ವಾಮಾ ಜಿಲ್ಲೆಯ ಮರ್ವಲ್ ಪ್ರದೇಶದಲ್ಲಿ ಉಗ್ರಗಾಮಿಗಳು ಅವಿತಿಟ್ಟುಕೊಂಡು ವಿಧ್ವಂಸಕ ಕೃತ್ಯ ಎಸಗಲು ಸಜ್ಜಾಗಿದ್ದಾರೆಂಬ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ನಿನ್ನೆ ಮಧ್ಯರಾತ್ರಿಯಿಂದಲೇ ಆ ಪ್ರದೇಶವನ್ನು ಸುತ್ತುವರಿದು ಭಯೋತ್ಪಾದಕರಿಗಾಗಿ ಶೋಧ ನಡೆಸುತ್ತಿದ್ದರು.
ಈ ಸಂದರ್ಭದಲ್ಲಿ ಉಗ್ರರು, ಯೋಧರ ಮೇಲೆ ಗುಂಡು ಹಾರಿಸಿದಾಗ ಎನ್‍ಕೌಂಟರ್ ನಡೆಯಿತು. ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.
ಮೃತ ಉಗ್ರಗಾಮಿಗಳಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನುವಶಪಡಿಸಿಕೊಳ್ಳಲಾಗಿದ್ದು, ಇದರಿಂದಾಗಿ ನಡೆಯಬಹುದಾಗಿದ್ದ ವಿಧ್ವಂಸಕ ಕೃತ್ಯವೊಂದು ತಪ್ಪಿದಂತಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ