ಶ್ರೀನಗರ:
ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಬಂಡಿಪೋರಾದಲ್ಲಿ ಸೇನೆ ಮತ್ತು ಉಗ್ರರ ನಡುವಿನ ಇಂದು ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.
ಮಧ್ಯರಾತ್ರಿ 2.30ರ ಸುಮಾರಿಗೆ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನ ಸೇನೆಯ ದಾಳಿಗೆ ಭಾರತೀಯ ಸೇನೆ ಕೂಡ ದಿಟ್ಟ ಉತ್ತರವನ್ನು ನೀಡಿದೆ. ಈ ಸಂದರ್ಭದಲ್ಲಿ ಓರ್ವ ಉಗ್ರ ಸಾವನ್ನಪ್ಪಿದ್ದು, ಇದೀಗ ಬಂಡೀಪೋರದಲ್ಲಿ ನಡೆದ ದಾಳಿಯಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹತ್ಯೆ ಮಾಡಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಉಗ್ರರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಜೊತೆಗೆ ಇಬ್ಬರು ಉಗ್ರರನ್ನು ವಶಪಡಿಸಿದೆ ಎಂದು ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ